ಮತ್ತೆ ಒಂದು ದಿನ ಪೊಲೀಸ್ ವಶಕ್ಕೆ ದಿಶಾ ರವಿ

ನವದೆಹಲಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸುವ ಹೆಸರಿನಲ್ಲಿ ಟೂಲ್ಕಿಟ್ ರಚಿಸಲಾಗಿದೆ ಎಂಬ ಆರೋಪದಲ್ಲಿ ಬಂಧಿಸಲಾಗಿರುವ ದಿಶಾ ರವಿ ಅವರನ್ನು ಮತ್ತೆ ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಫೆಬ್ರುವರಿ 13ರಂದು ದೆಹಲಿ ಪೊಲೀಸರು ದಿಶಾ ಅವರನ್ನು ಬಂಧಿಸಿದ್ದರು. ಸೋಮವಾರ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ದಿಶಾ ಅವರನ್ನು ಹಾಜರುಪಡಿಸಲಾಯಿತು. ನ್ಯಾಯಾಲಯ ಕೇವಲ ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ನೀಡಲು ಒಪ್ಪಿಗೆ ಸೂಚಿಸಲಾಯಿತು. ಮಂಗಳವಾರ ಮತ್ತೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ದೆಹಲಿ ಪೊಲೀಸರು ಕೋರಿದ್ದರು.
ದಿಶಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡುವ ಸಾಧ್ಯತೆ ಇದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.