ಶನಿವಾರ, ಮೇ 21, 2022
28 °C

ಆಕಾರ್ ಪಟೇಲ್ ವಿರುದ್ಧದ ಎಲ್ಒಸಿ: 16ಕ್ಕೆ ಕೋರ್ಟ್ ತೀರ್ಪು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ಅವರ ವಿರುದ್ಧ ಹೊರಡಿಸಲಾದ ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹಿಂಪಡೆಯುವ  ಹಾಗೂ ಪಟೇಲ್ ಅವರ ಕ್ಷಮೆಯಾಚಿಸುವಂತೆ ನ್ಯಾಯಾಲಯವು ನೀಡಿರುವ ನಿರ್ದೇಶನದ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಏಪ್ರಿಲ್ 16ರಂದು ದೆಹಲಿ ನ್ಯಾಯಾಲಯವು ತೀರ್ಪು ಪ್ರಕಟಿಸಲಿದೆ.

ವಿಶೇಷ ನ್ಯಾಯಾಧೀಶರಾದ ಸಂತೋಷ್ ಸ್ನೇಹಿ ಮಾನ್ ಅವರು, ‘ಸಿಬಿಐ ಸಲ್ಲಿಸಿರುವ ಲಿಖಿತರೂಪದ ಪರಿಷ್ಕೃತ ಅರ್ಜಿಯನ್ನು ಬುಧವಾರ ಸ್ವೀಕರಿಸಿದ್ದೇನೆ. ಅದನ್ನು ಪರಿಶೀಲಿಸಲು ಸಮಯ ಬೇಕು’ ಎಂದು ಹೇಳಿ ತೀರ್ಪನ್ನು ಏ. 16ಕ್ಕೆ ಮುಂದೂಡಿದರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪನ್ನು ಪರಿಷ್ಕರಿಸಲು ಕೋರಿ ಸಿಬಿಐ ಸಲ್ಲಿಸಿದ ಮನವಿಯ ಕುರಿತು ಸಿಬಿಐ ಮತ್ತು ಆರೋಪಿಗಳ ಪರ ವಾದ ಮಂಡಿಸಿದ ವಕೀಲರ ವಾದವನ್ನು ಆಲಿಸಿದ ನಂತರ, ನ್ಯಾಯಾಲಯವು ಈ ಹಿಂದೆ ಮಂಗಳವಾರಕ್ಕೆ ಆದೇಶವನ್ನು ಕಾಯ್ದಿರಿಸಿತ್ತು.

ಆಕಾರ್ ಪಟೇಲ್ ಅವರ ವಿರುದ್ಧ ಹೊರಡಿಸಿದ್ದ ಲುಕ್‌ಔಟ್ ನೋಟಿಸ್ ಹಿಂಪಡೆಯಲು ಹಾಗೂ ಅವರ ಕ್ಷಮೆಯಾಚಿಸುವಂತೆ ಸಿಬಿಐಗೆ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಪವನ್ ಕುಮಾರ್ ಏಪ್ರಿಲ್ 7ರಂದು ಆದೇಶ ಹೊರಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು