ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 - 18 ವರ್ಷದವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ತಜ್ಞರಿಂದ ಡಿಸಿಜಿಐಗೆ ಶಿಫಾರಸು

Last Updated 12 ಅಕ್ಟೋಬರ್ 2021, 8:39 IST
ಅಕ್ಷರ ಗಾತ್ರ

ನವದೆಹಲಿ:ಕೋವಿಡ್–19 ಲಸಿಕೆಕೋವ್ಯಾಕ್ಸಿನ್ ಅನ್ನು 2 - 18 ವರ್ಷ ವಯೋಮಾನದವರಿಗೆ ನೀಡಲು ತಜ್ಞರ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ.

ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಕೋವಿಡ್–19 ಲಸಿಕೆಯನ್ನು 2ರಿಂದ 18 ವರ್ಷದವರಿಗೆ ನೀಡಬಹುದೆಂದು ವಿಷಯ ತಜ್ಞರ ಸಮಿತಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕಕ್ಕೆ (ಡಿಸಿಜಿಐ) ಶಿಫಾರಸು ಮಾಡಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿಯು ಡಿಸಿಜಿಐಗೆ ಅಕ್ಟೋಬರ್ 6ರಂದು ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT