ಮಂಗಳವಾರ, ಮೇ 17, 2022
26 °C
ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ಮಹಾರಾಷ್ಟ್ರ: ವಿದರ್ಭ ಪ್ರಾಂತ್ಯದಲ್ಲಿ ಕಠಿಣ ಲಾಕ್‌ಡೌನ್?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಕೋವಿಡ್‌ 19‘ ಸಾಂಕ್ರಾಮಿಕದ ಪ್ರಕರಣಗಳ ಸಂಖ್ಯೆ ಏರುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ, ವಿದರ್ಭ ಪ್ರಾಂತ್ಯದ ಯವತ್ಮಾಲ್‌, ಅಮರಾವತಿ ಮತ್ತು ಅಕೋಲಾ ನಗರಗಳಲ್ಲಿ ಯಾವುದೇ ಕ್ಷಣದಲ್ಲಿ ‘ಕಟ್ಟುನಿಟ್ಟಿನ ಲಾಕ್‌ಡೌನ್‌‘ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪ ಮುಖ್ಯಮಂತ್ರಿ ಅಜತ್ ಪವಾರ್ ಅವರು ಗುರುವಾರ ಚರ್ಚೆ ನಡೆಸಿದ್ದಾರೆ.

ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಅವಲೋಕಿಸುವುದಕ್ಕಾಗಿ ಒಬ್ಬರು ಸರ್ಕಾರಿ ವೈದ್ಯರನ್ನು ಅಮರಾವತಿಗೆ ಕಳುಹಿಸಲಾಗಿದೆ. ಅವರು ದೂರವಾಣಿ ಮೂಲಕ ನಗರದಲ್ಲಿರುವ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಬುಧವಾರ 4,787 ಹೊಸ ಕೋವಿಡ್‌ 19 ಪ್ರಕರಣಗಳು ವರದಿಯಾಗಿವೆ. ಇದು ಈ ವರ್ಷದಲ್ಲೇ ಅತ್ಯಧಿಕ ಪ್ರಮಾಣದಲ್ಲಿ ವರದಿಯಾಗಿರುವ ಸೋಂಕಿನ ಪ್ರಕರಣಗಳಾಗಿವೆ. ಅಮರಾವತಿಯಲ್ಲಿ ಒಂದು ದಿನದಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಜಿಲ್ಲೆಯಲ್ಲಿ ಮಂಗಳವಾರ 82 ಪ್ರಕರಣಗಳು ವರದಿಯಾಗಿತ್ತು, ಬುಧವಾರ 230 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅಕೋಲಾ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಬುಧವಾರ 105 ಪ್ರಕರಣಗಳು ದಾಖಲಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು