ಭಾನುವಾರ, ಏಪ್ರಿಲ್ 11, 2021
31 °C
ಮಹಾರಾಷ್ಟ್ರದಲ್ಲಿ ಉಲ್ಬಣಿಸುತ್ತಿರುವ ಕೋವಿಡ್‌–50 ಜನರಿಗಷ್ಟೇ ಅವಕಾಶ ನಿಯಮ ಉಲ್ಲಂಘನೆ

ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿ ಮದುವೆಯಲ್ಲಿ ಸೇರಿದ 700 ಮಂದಿ: ಪ್ರಕರಣ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿರುವುದರಿಂದ ಮದುವೆಗಳಿಗೆ 50 ಜನರ ಮಿತಿ ವಿಧಿಸಲಾಗಿದ್ದು, ಠಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಮದುವೆಯೊಂದರಲ್ಲಿ ಸುಮಾರು 700 ಜನರು ಪಾಲ್ಗೊಂಡಿದ್ದ ಕಾರಣಕ್ಕೆ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

‘ಕಲ್ಯಾಣ್‌ (ಪೂರ್ವ)ನ ಮಂಟಪವೊಂದರಲ್ಲಿ ಬುಧವಾರ ನಡೆದ ಮದುವೆಯಲ್ಲಿ ಸುಮಾರು 700 ಜನರು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಕಲ್ಯಾಣ್‌ ಡೊಂಬಿವಿಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದರು. ಸರ್ಕಾರದ ಮಾರ್ಗಸೂಚಿಯ ಉಲ್ಲಂಘನೆಯಾಗಿರುವುದು ದೃಢಪಟ್ಟ ಕಾರಣ ಪೊಲೀಸ್ ಠಾಣೆಯಲ್ಲಿ ಸಂಘಟಕರಾದ ರಾಜೇಶ್‌ ಮಹಾತ್ರೆ ಮತ್ತು ಮಹೇಶ್‌ ರಾವತ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು’ ಎಂದು ಪಾಲಿಕೆಯ ಪ್ರಕಟಣೆ ತಿಳಿಸಿದೆ.‌

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು