ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಏಳು ತಿಂಗಳ ಬಳಿಕ ಸಕ್ರಿಯ ಪ್ರಕರಣಗಳು ಇಳಿಕೆ

Last Updated 20 ಜನವರಿ 2021, 10:42 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಸುಮಾರು ಏಳು ತಿಂಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷಕ್ಕಿಂತ ಕಡಿಮೆಯಾಗಿದೆ. ಸದ್ಯ ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ ಪೈಕಿ ಶೇಕಡ 2.63ರಷ್ಟು ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

‘ಶೇಕಡ 72 ರಷ್ಟು ಸಕ್ರಿಯ ಪ್ರಕರಣಗಳು ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ಕೇಂದ್ರೀಕೃತವಾಗಿವೆ. 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 10,000ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ’ ಎಂದು ಸಚಿವಾಲಯವು ಹೇಳಿದೆ.

ದೇಶದಲ್ಲಿ 207 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,97,201ಕ್ಕೆ ಕಡಿಮೆಯಾಗಿದೆ. ಕಳೆದ ವರ್ಷ ಜೂನ್‌ 20 ರಂದು ಒಟ್ಟು 1,97,387 ಪ್ರಕರಣಗಳಿದ್ದವು.

‘ಕಳೆದ 24 ಗಂಟೆಗಳಲ್ಲಿ 16,988 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ ಭಾರತದಲ್ಲಿ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ. ವಿಶ್ವದಲ್ಲಿ ಕಳೆದ ಏಳು ದಿನಗಳಿಂದ ಕಡಿಮೆ ಪ್ರಕರಣಗಳು ದಾಖಲಾದ ದೇಶಗಳಲ್ಲಿ ಭಾರತವೂ ಒಂದು’ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ಜನವರಿ 20ಕ್ಕೆ ಒಟ್ಟು 6,74,835 ಮಂದಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿದೆ. ಕಳೆದ 24 ಗಂಟೆಗಳಲ್ಲಿ 2,20,786 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ. ಇದುವರೆಗೆ 1.02 ಕೋಟಿ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಚೇತರಿಕೆ ‍ಪ್ರಮಾಣದಲ್ಲಿ ಮಹಾರಾಷ್ಟ್ರ(4,516 ), ಕೇರಳ(4,296) ಮತ್ತು ಕರ್ನಾಟಕ (807) ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT