ಶುಕ್ರವಾರ, ಮೇ 20, 2022
24 °C

Covid-19 India Update: 6,984 ಹೊಸ ಪ್ರಕರಣ, ಸಕ್ರಿಯ ಸೋಂಕಿತರ ಸಂಖ್ಯೆ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಹೊಸದಾಗಿ 6,984 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 3,47,10,628ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯಲ್ಲಿ ತಿಳಿಸಿದೆ.

ಬುಧವಾರ ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದು, ಸದ್ಯ 87,562 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ.

ಇದೇ ಅವಧಿಯಲ್ಲಿ 247 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಒಟ್ಟಾರೆ ಸಾವಿಗೀಡಾದವರ ಸಂಖ್ಯೆ 4,76,135 ಆಗಿದೆ.

ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಶೇ 0.25ರಷ್ಟು ಸಕ್ರಿಯ ಪ್ರಕರಣಗಳಿದ್ದು, ಇದು ಕಳೆದ ಮಾರ್ಚ್‌ನಿಂದೀಚೆಗೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ. ಚೇತರಿಕೆಯ ದರವು ಶೇ 98.38ರಷ್ಟಿದ್ದು, ಮಾರ್ಚ್‌ನಿಂದೀಚೆಗೆ ಅಂತ್ಯತ ಹೆಚ್ಚು ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 8,168 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 3,41,46,931 ಜನರು ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ 134.61 ಕೋಟಿಗೂ ಅಧಿಕ ಡೋಸ್‌ ಕೋವಿಡ್‌–19 ಲಸಿಕೆ ವಿತರಣೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು