ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 3,87,987ಕ್ಕೆ ಏರಿಕೆ

Last Updated 12 ಆಗಸ್ಟ್ 2021, 7:56 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದಲ್ಲಿ ಗುರುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 41,195 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆಯು 3,20,77,706ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಇದೇ ಅವಧಿಯಲ್ಲಿ 490 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ಸೋಂಕಿನಿಂದ 4,29,669 ಮಂದಿ ಸಾವಿಗೀಡಾಗಿದ್ದಾರೆ. ಇದರ ಜತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯೂ 3,87,987ಕ್ಕೆ ಏರಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.21 ಪಾಲನ್ನು ಹೊಂದಿದೆ.

‘ದೇಶದ ಚೇತರಿಕೆ ಪ್ರಮಾಣವು ಶೇಕಡ 97.45 ರಷ್ಟಿದೆ. ಬುಧವಾರ 21,24,953 ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ ದೇಶದಲ್ಲಿ 48,73,70,196 ಪರೀಕ್ಷೆಗಳನ್ನು ನಡೆಸಲಾಗಿದೆ’ ಎಂದು ಸಚಿವಾಲಯವು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT