ಕೋವಿಡ್: ಮುಂಬೈನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ

ಮುಂಬೈ: ಕೋವಿಡ್ ಪ್ರಕರಣಗಳ ಹೆಚ್ಚಳ ಹಾಗೂ ಓಮೈಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ ಹೇರಲಾಗಿದೆ.
ಈ ಕುರಿತು ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಆದೇಶ ಹೊರಡಿಸಿದೆ. ಒಳಾಂಗಣ ಅಥವಾ ಬಹಿರಂಗ ಸಂಭ್ರಮಾಚರಣೆ ನಿಷೇಧಿಸಲಾಗಿದೆ.
ಇದನ್ನೂ ಓದಿ: ಕೋವಿಡ್ ಹೆಚ್ಚಳ: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ
ಡಿಸೆಂಬರ್ 25ರ ಮಧ್ಯರಾತ್ರಿಯಿಂದ ಆದೇಶ ಜಾರಿಗೆ ಬರಲಿದ್ದು, ಮುಂದಿನ ನಿರ್ದೇಶನದವರೆಗೂ ಜಾರಿಯಲ್ಲಿರುತ್ತದೆ.
ಬಿಎಂಸಿ ವ್ಯಾಪ್ತಿಯಲ್ಲಿ ಒಳಾಂಗಣ ಅಥವಾ ಬಹಿರಂಗ ಪ್ರದೇಶಗಳಲ್ಲಿ ಹೊಸ ವರ್ಷದ ಯಾವುದೇ ಸಮಾರಂಭ ಅಥವಾ ಸಂಭ್ರಮಾಚರಣೆ ನಡೆಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಆದೇಶವು ಹೊಸ ವರ್ಷದ ಸಂಭ್ರಮಾಚರಣೆ ನಡೆಸುವ ಹೋಟೆಲ್, ಬಾರ್, ರೆಸ್ಟೋರೆಂಟ್‌ಗಳಿಗೆ ಅನ್ವಯಿಸುತ್ತದೆ.
ಮಹಾರಾಷ್ಟ್ರ ಸರ್ಕಾರ ಕೂಡ ಹೊಸ ಮಾರ್ಗಸೂಚಿ ಹೊರಡಿಸಿದ್ದು, ರಾಜ್ಯದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೂ ಸಾರ್ವಜನಿಕ ಪ್ರದೇಶಗಳಲ್ಲಿ ಐದು ಮಂದಿ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗಂಪು ಸೇರುವುದನ್ನು ನಿಷೇಧಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.