Covid India Updates: ಒಂದೇ ದಿನದಲ್ಲಿ 2,527 ಹೊಸ ಕೋವಿಡ್ ಪ್ರಕರಣಗಳು ವರದಿ

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಉಲ್ಬಣಗೊಂಡಿದ್ದು, ಒಂದೇ ದಿನದಲ್ಲಿ 2,527 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,30,54,952ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳೂ 15,079ಕ್ಕೆ ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 33 ಮಂದಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಅಸುನೀಗಿದವರ ಸಂಖ್ಯೆ 5,22,149ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಶೇಕಡ 0.04 ರಷ್ಟು ಪಾಲನ್ನು ಹೊಂದಿದೆ. ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇಕಡ 98.75 ರಷ್ಟಿದೆ. ದೈನಂದಿನ ಸೋಂಕು ದೃಢ ಪ್ರಮಾಣವು 0.56 per ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಾದ್ಯಂತ ಈವರೆಗೆ 187.46 ಕೋಟಿ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಈವರೆಗೆ 5,22,149 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ 1,47,831, ಕೇರಳದಲ್ಲಿ 68,781, ಕರ್ನಾಟಕದಲ್ಲಿ 40,057 ಜನರು ಸಾವಿಗೀಡಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.