ಶನಿವಾರ, ಜುಲೈ 2, 2022
25 °C
ಸಕ್ರಿಯ ಪ್ರಕರಣಗಳ ಸಂಖ್ಯೆ 2,175ಕ್ಕೆ ಏರಿಕೆ

ಕೊರೊನಾ: ಮಹಾರಾಷ್ಟ್ರದಲ್ಲಿ 470 ಹೊಸ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಎರಡು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಅಲ್ಪಮಟ್ಟಿಗೆ ಏರಿಕೆಯಾಗಿದೆ. ಬುಧವಾರ ರಾಜ್ಯದಲ್ಲಿ 470 ಪ್ರಕರಣಗಳು ಪತ್ತೆಯಾಗಿವೆ. 

ಈ ಪೈಕಿ ಮುಂಬೈ ಮಹಾನಗರ ಪಾಲಿಕೆ ಪ್ರದೇಶದಲ್ಲಿ 372, ಪುಣೆಯಲ್ಲಿ 68 ಪ್ರಕರಣಗಳು ದೃಢಪಟ್ಟಿವೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿದೆ.

ಹೊಸ ಸೋಂಕಿತರೂ ಸೇರಿ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,175ಕ್ಕೆ ಹೆಚ್ಚಿದೆ. ಈ ಮೂಲಕ ಈವರೆಗೆ ಕೋವಿಡ್ ಸೋಂಕಿಗೆ ತುತ್ತಾದವರ ಸಂಖ್ಯೆ 78,83,818ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 1,47,857 ತಲುಪಿದೆ. ಚೇತರಿಕೆ ಪ್ರಮಾಣ ಶೇ 98ರಷ್ಟಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಮೂರನೇ ಅಲೆ ಸಂದರ್ಭದಲ್ಲಿ ಅಂದರೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ನಿತ್ಯ 450–550 ಪ್ರಕರಣಗಳು ಪತ್ತೆಯಾಗುತ್ತಿದ್ದವು.

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.