ಸೋಮವಾರ, ಜನವರಿ 17, 2022
21 °C

5 ದಿನಗಳಲ್ಲಿ 4 ಪಟ್ಟು ಏರಿಕೆ ಕಂಡ ಕೋವಿಡ್, ಹೆಚ್ಚಿದ ಮೂರನೇ ಅಲೆ ಭೀತಿ: ವರದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಕೇವಲ ಐದು ದಿನಗಳಲ್ಲಿ ನಾಲ್ಕು ಪಟ್ಟು ಹೆಚ್ಚಳ ಕಂಡಿವೆ. ಇದೇ ಅವಧಿಯಲ್ಲಿ ಓಮೈಕ್ರಾನ್ ಪ್ರಕರಣಗಳು ಮೂರು ಪಟ್ಟು ಹೆಚ್ಚಳವಾಗಿವೆ. ಇದು ಕೋವಿಡ್ ಮೂರನೇ ಅಲೆಯ ಆತಂಕ ಹೆಚ್ಚಿಸಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಒಂದೇ ದಿನ ದೇಶದಲ್ಲಿ 22,775 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. ಗುರುವಾರ 16,764 ಪ್ರಕರಣಗಳು ವರದಿಯಾಗಿದ್ದವು. ಬುಧವಾರ 13,154 ಪ್ರಕರಣ ದೃಢಪಟ್ಟಿದ್ದರೆ, ಮಂಗಳವಾರ 9,195 ಹಾಗೂ ಸೋಮವಾರ 6,358 ಪ್ರಕರಣಗಳು ವರದಿಯಾಗಿದ್ದವು.

ಸೋಮವಾರ 653 ಇದ್ದ ಓಮೈಕ್ರಾನ್ ಪ್ರಕರಣಗಳು ಶುಕ್ರವಾರದ ವೇಳೆಗೆ 1,431ಕ್ಕೆ ಏರಿಕೆಯಾಗಿವೆ. ಓಮೈಕ್ರಾನ್ ಪ್ರಕರಣಗಳಲ್ಲಿ ಗಣನೀಯ ಹೆಚ್ಚಳ ಕಂಡುಬರುತ್ತಿದೆ. ದೇಶದಲ್ಲಿ ಡಿಸೆಂಬರ್ 2ರಂದು ಮೊದಲು ವರದಿಯಾದ ಓಮೈಕ್ರಾನ್‌ ಪ್ರಕರಣ 100 ತಲುಪಲು 15 ದಿನ ತೆಗೆದುಕೊಂಡಿತ್ತು. ಇದು ಡಿಸೆಂಬರ್‌ 21ಕ್ಕೆ 200ರ ಗಡಿ ದಾಟಿತು. ಡಿಸೆಂಬರ್ 27ಕ್ಕೆ 500 ದಾಟಿತು ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: 

ಅನೇಕ ರಾಜ್ಯಗಳು ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಿದ್ದರೂ ಪ್ರಕರಣಗಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.

ಓಮೈಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಅನೇಕರು ಸೋಂಕಿತರಾಗುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಸಹ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಭಾರಿ ಹೆಚ್ಚಳ ಕಂಡುಬಂದಿದೆ. ಕಳೆದ 5 ದಿನಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಶೇ 40ರಷ್ಟು ಹೆಚ್ಚಳವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು