ನಾಗ್ಪುರ: ಮಹಾರಾಷ್ಟ್ರದ ನಾಗ್ಪುರಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದ್ದು,ಮಾರ್ಚ್ 15 ರಿಂದ 21 ತನಕ ನಾಗ್ಪುರಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಠಿಣ ಲಾಕ್‌ಡೌನ್ ಅನ್ನು ಹೇರಲು ನಿರ್ಧರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ನಿತಿನ್ ರಾವುತ್ ಅವರು ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬಳಿಕ ಈ ನಿರ್ಧಾರಕ್ಕೆ ಬರಲಾಯಿತು.

‘ಈ ಲಾಕ್‌ಡೌನ್ ಅವಧಿಯಲ್ಲಿ ಖಾಸಗಿ ಕಚೇರಿಗಳು ಸಂಪೂರ್ಣವಾಗಿ ಮುಚ್ಚಿರಲಿವೆ. ಸರ್ಕಾರಿ ಕಚೇರಿಗಳು ಶೇಕಡ 25ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ. ಅಗತ್ಯ ವಸ್ತುಗಳ ಅಂಗಡಿಗಳು ತೆರದಿರಲಿವೆ. ಮಧ್ಯವನ್ನು ಆನ್‌ಲೈನ್ ಮೂಲಕ ಮಾತ್ರ ಮಾರಾಟ ಮಾಡಲಾಗುವುದು. ಜನರು ಲಾಕ್‌ಡೌನ್ ಸಮಯದಲ್ಲಿ ವಿನಾ ಕಾರಣ ಮನೆಯಿಂದ ಹೊರಗೆ ಬರಬಾರದು’ ಎಂದು ಸಚಿವ ರಾವುತ್ ತಿಳಿಸಿದರು.

ಜಿಲ್ಲೆಯಲ್ಲಿ ಬುಧವಾರ 1710 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,62,053ಕ್ಕೆ ಏರಿಕೆಯಾಗಿದೆ. ಪ್ರಸ್ತುತ ನಾಗಪುರದಲ್ಲಿ 12,166 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 4,417 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.