ಮಂಗಳವಾರ, ಸೆಪ್ಟೆಂಬರ್ 29, 2020
28 °C

Covid-19 India Update | ದೇಶದಾದ್ಯಂತ 19 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಇಂದು 52,509 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 857 ಮಂದಿ ಮೃತಪಟ್ಟಿದ್ದಾರೆ. 

ದೇಶದಲ್ಲಿ ಈವರೆಗೆ 19,08,255 ಮಂದಿಗೆ ಸೋಂಕು ತಗುಲಿದ್ದು, 39,795 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 12,82,216 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,86,244 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 4,50,196 ಜನರಿಗೆ ಸೋಂಕು ತಗುಲಿದೆ. 1,47,324 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 2,87,030 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 15,842 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೂ 2,63,222 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 2,02,283 ಮಂದಿ ಗುಣಮುಖರಾಗಿದ್ದಾರೆ. 56,698 ಸಕ್ರಿಯ ಪ್ರಕರಣಗಳಿದ್ದು, 4,241 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ. 

ಆಂದ್ರ ಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 1,66,586 ಜನರಿಗೆ ಸೋಂಕು ತಗುಲಿದೆ. 76,377 ಸಕ್ರಿಯ ಪ್ರಕರಣಗಳೊಂದಿಗೆ 88,672 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,537 ಜನರು ಸಾವಿಗೀಡಾಗಿದ್ದಾರೆ.

ರಾಜಧಾನಿ ದೆಹಲಿಯಲ್ಲಿ 1,38,482 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದುವರೆಗೆ 4,021 ಮಂದಿ ಕೊನೆಯುಸಿರೆಳೆದಿದ್ದಾರೆ. 10,207 ಸಕ್ರಿಯ ಪ್ರಕರಣಗಳೊಂದಿಗೆ 1,24,254 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಈವರೆಗೂ 97,362 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 55,393 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 40,191 ಸಕ್ರಿಯ ಪ್ರಕರಣಗಳೊಂದಿಗೆ ಒಟ್ಟಾರೆ 1,778 ಜನರು ಮೃತಪಟ್ಟಿದ್ದಾರೆ.

ಗುಜರಾತ್‌ನಲ್ಲಿ 2,508, ಪಶ್ಚಿಮ ಬಂಗಾಳದಲ್ಲಿ 1,731, ಉತ್ತರ ಪ್ರದೇಶ 1,778, ಮಧ್ಯ ಪ್ರದೇಶ 900 ಮತ್ತು ರಾಜಸ್ಥಾನದಲ್ಲಿ 715 ಜನರು ಕೊರೊನಾ ವೈರಸ್ ಸೋಂಕಿ‌ನಿಂದ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು