ನವದೆಹಲಿ: ದೇಶದಲ್ಲಿ ಗುರುವಾರ ರಾತ್ರಿ ವೇಳೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ 20 ಲಕ್ಷದ ಗಡಿ ದಾಟಿದೆ.

ದೇಶದಾದ್ಯಂತ ಇಂದು 61,669 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 891 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ 20,19,930ಲಕ್ಷಮಂದಿಗೆ ಸೋಂಕು ದೃಢಪಟ್ಟಿದ್ದು, 41,573ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 13,70,347 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,95,501ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 4,79,779 ಜನರಿಗೆ ಸೋಂಕು ತಗುಲಿದೆ. 1,46,268 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 3,16,375 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 16,792 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೂ 2,79,144 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 2,21,087 ಮಂದಿ ಗುಣಮುಖರಾಗಿದ್ದಾರೆ. 54,184 ಸಕ್ರಿಯ ಪ್ರಕರಣಗಳಿದ್ದು, 4,571ಮಂದಿ ಕೊರೊನಾ ವೈರಸ್ನಿಂದಾಗಿ ಸಾವಿಗೀಡಾಗಿದ್ದಾರೆ.

ಆಂದ್ರ ಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 1,96,789 ಜನರಿಗೆ ಸೋಂಕು ತಗುಲಿದೆ. 80,426 ಸಕ್ರಿಯ ಪ್ರಕರಣಗಳೊಂದಿಗೆ 1,12,870 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,753 ಜನರು ಸಾವಿಗೀಡಾಗಿದ್ದಾರೆ.

ಇತ್ತ ರಾಜಧಾನಿ ದೆಹಲಿಯಲ್ಲಿ 1,41,531ಮಂದಿಗೆ ಸೋಂಕು ದೃಢಪಟ್ಟಿದ್ದು, ಇದುವರೆಗೆ 4,059 ಮಂದಿ ಕೊನೆಯುಸಿರೆಳೆದಿದ್ದಾರೆ.1,27,124ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಈವರೆಗೂ 1,08,974 ಮಂದಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, 63,402 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 41,973 ಸಕ್ರಿಯ ಪ್ರಕರಣಗಳೊಂದಿಗೆ ಒಟ್ಟಾರೆ 1,918ಜನರು ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಗುಜರಾತ್ನಲ್ಲಿ 2,584, ಪಶ್ಚಿಮ ಬಂಗಾಳದಲ್ಲಿ 1,902, ಮಧ್ಯ ಪ್ರದೇಶ 946 ಮತ್ತು ರಾಜಸ್ಥಾನದಲ್ಲಿ 753ಜನರು ಕೊರೊನಾ ವೈರಸ್ನಿಂದ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.