ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ದೇಶದಾದ್ಯಂತ 79 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

Last Updated 9 ನವೆಂಬರ್ 2020, 16:36 IST
ಅಕ್ಷರ ಗಾತ್ರ

ನವದೆಹಲಿ:

ಕಳೆದ 24 ಗಂಟೆಗಳಲ್ಲಿ ಕೇರಳದಾದ್ಯಂತ 3,593 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ವರೆಗೆ 4,08,460 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 79,410 ಸಕ್ರಿಯ ಪ್ರಕರಣಗಳಿವೆ.

ಆಂದ್ರ ಪ್ರದೇಶದಲ್ಲಿ ಈ ವರೆಗೆ ಒಟ್ಟು 8,44,359 ಪ್ರಕರಣಗಳು ದಾಖಲಾಗಿದ್ದು, 8,16,322 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,392 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜಸ್ಥಾನದಲ್ಲಿ ಒಂದೇ ದಿನಕ್ಕೆ 1,859 ಹೊಸ ಪ್ರಕರಣಗಳು ದಾಖಲಾಗಿದ್ದು, 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುಜರಾತ್‌ನಲ್ಲಿ 971 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದ್ದು, ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 7,745 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 45,903 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 490 ಮಂದಿ ಮೃತಪಟ್ಟಿದ್ದಾರೆ ಮತ್ತು 48,405 ಜನರು ಗುಣಮುಖರಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ 85,53,657 ಮಂದಿಗೆ ಸೋಂಕು ತಗುಲಿದ್ದು, 1,26,611 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 79,17,373 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸದ್ಯ 5,09,673 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವೆಂಬರ್ 8ರವರೆಗೆ ದೇಶದಲ್ಲಿ 11,85,72,192 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 8,35,401 ಜನರನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT