ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಮಹಾರಾಷ್ಟ್ರದಲ್ಲಿ 5,753 ಹೊಸ ಪ್ರಕರಣ

Last Updated 22 ನವೆಂಬರ್ 2020, 16:25 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 5,753 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 50 ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ ಒಟ್ಟು 46,623 ಸೋಂಕಿತರು ಮೃತಪಟ್ಟಿದ್ದು, 81,512 ಪ್ರಕರಣಗಳು ಸಕ್ರಿಯವಾಗಿವೆ.

ಗುಜರಾತ್‌ನಲ್ಲಿ 1,495 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 13 ಮಂದಿ ಮೃತಪಟ್ಟಿದ್ದಾರೆ. ಈ ವರೆಗಿನ ಒಟ್ಟು ಪ್ರಕರಣಗಳು ಸಂಖ್ಯೆ 1,97,412ಕ್ಕೆ ತಲುಪಿದೆ.

ತಮಿಳುನಾಡಿನಲ್ಲಿ 1,655 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 7.69 ಲಕ್ಷಕ್ಕೂ ಅಧಿಕವಾಗಿದೆ. 11,605 ಮಂದಿ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ.

ಪಂಜಾಬ್‌ನಲ್ಲಿ 710 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 19 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಕರ್ನಾಟಕದಾದ್ಯಂತ ಕಳೆದ 24 ಗಂಟೆಗಳಲ್ಲಿ 1,704 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ

ದೇಶದಾದ್ಯಂತ 45,209 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 501 ಜನರು ಸಾವಿಗೀಡಾಗಿದ್ದಾರೆ. 43,493 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, 4,40,962 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 1,33,227 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆಯು 90,95,807ಕ್ಕೆ ಏರಿಕೆಯಾಗಿದೆ.

ಒಟ್ಟಾರೆ 85,21,617 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 13,17,33,134 ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ ಶನಿವಾರ 10,75,326 ಜನರಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ 8,71,342 ಜನರಿಗೆ ಸೋಂಕು ತಗುಲಿದ್ದು, 24,733 ಸಕ್ರಿಯ ಪ್ರಕರಣಗಳಿವೆ. 8,34,968 ಜನರು ಗುಣಮುಖರಾಗಿದ್ದು, 11,641 ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT