ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 1 ಲಕ್ಷ ದಾಟಿದ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ

Last Updated 3 ಅಕ್ಟೋಬರ್ 2020, 5:23 IST
ಅಕ್ಷರ ಗಾತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಇಂದು 1,069 ಮಂದಿ ಮೃತಪಡುವುದರೊಂದಿಗೆ ಈವರೆಗೂ ಮೃತಪಟ್ಟಿರುವವರ ಸಂಖ್ಯೆಯು ಲಕ್ಷ ದಾಟಿದೆ.

ಕಳೆದ 24 ಗಂಟೆಗಳಲ್ಲಿ 79,476 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಈವರೆಗೆ 64,73,545 ಮಂದಿಗೆ ಸೋಂಕು ತಗುಲಿದ್ದು, 1,00,842 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 54,27,707 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,44,996 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 14,00,922 ಜನರಿಗೆ ಸೋಂಕು ತಗುಲಿದೆ. 2,59,440 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 11,04,426 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 37,056 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 7,00,235 ಜನರಿಗೆ ಸೋಂಕು ತಗುಲಿದೆ. 57,858 ಸಕ್ರಿಯ ಪ್ರಕರಣಗಳೊಂದಿಗೆ 6,36,508 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 5,869 ಜನರು ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 6,20,630ಕ್ಕೆ ಏರಿಕೆಯಾಗಿದೆ. ಈವರೆಗೆ 9,119 ಜನ ಅಸುನೀಗಿದ್ದು, 4,99,506 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,11,986 ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ ಈವರೆಗೂ 6,03,290 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 5,47,335 ಮಂದಿ ಗುಣಮುಖರಾಗಿದ್ದಾರೆ. 46,369 ಸಕ್ರಿಯ ಪ್ರಕರಣಗಳಿದ್ದು, 9,586 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಈವರೆಗೂ 4,03,101 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 3,46,859 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 50,378 ಸಕ್ರಿಯ ಪ್ರಕರಣಗಳೊಂದಿಗೆ ಒಟ್ಟಾರೆ 5,864 ಜನರು ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಗುಜರಾತ್‌ನಲ್ಲಿ 3,460, ಪಶ್ಚಿಮ ಬಂಗಾಳದಲ್ಲಿ 5,017, ಮಧ್ಯ ಪ್ರದೇಶ 2,336 ಮತ್ತು ರಾಜಸ್ಥಾನದಲ್ಲಿ 1,500 ಜನರು ಕೊರೊನಾ ವೈರಸ್‌ನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT