ಮಂಗಳವಾರ, ನವೆಂಬರ್ 24, 2020
25 °C

Covid-19 India Update | 24 ಗಂಟೆಗಳಲ್ಲಿ 45,149 ಹೊಸ ಪ್ರಕರಣ, 480 ಜನ ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ದೇಶದಾದ್ಯಂತ ಇಂದು 45,149 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 480  ಮಂದಿ ಮೃತಪಟ್ಟಿದ್ದಾರೆ ಮತ್ತು 59,105 ಜನರು ಗುಣಮುಖರಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ 79,09,960 ಮಂದಿಗೆ ಸೋಂಕು ತಗುಲಿದ್ದು, 1,19,014 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 70,78,123 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,53,717 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 16,45,020 ಜನರಿಗೆ ಸೋಂಕು ತಗುಲಿದೆ. 1,41,001 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 14,60,755 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 43,264 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಈವರೆಗೂ 8,07,023 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. 30,860 ಸಕ್ರಿಯ ಪ್ರಕರಣಗಳೊಂದಿಗೆ 7,69,576 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 6,587 ಜನರು ಸಾವಿಗೀಡಾಗಿದ್ದಾರೆ.

ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಒಟ್ಟಾರೆ 8,02,817 ಜನರಿಗೆ ಸೋಂಕು ತಗುಲಿದ್ದು, 10,873 ಜನರು ಸಾವಿಗೀಡಾಗಿದ್ದಾರೆ. 81,069 ಸಕ್ರಿಯ ಪ್ರಕರಣಗಳಿದ್ದು, 7,10,843 ಜನರು ಗುಣಮುಖರಾಗಿದ್ದಾರೆ. 

ತಮಿಳುನಾಡಿನಲ್ಲಿ ಈವರೆಗೂ 7,09,005 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 6,67,475 ಮಂದಿ ಗುಣಮುಖರಾಗಿದ್ದಾರೆ. 30,606 ಸಕ್ರಿಯ ಪ್ರಕರಣಗಳಿದ್ದು, 10,924 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ. 

ಉತ್ತರ ಪ್ರದೇಶದಲ್ಲಿ 4,70,270 ಮಂದಿಗೆ ಸೋಂಕು ತಗುಲಿದ್ದರೆ, ಗುಜರಾತ್‌ನಲ್ಲಿ 3,686, ಪಶ್ಚಿಮ ಬಂಗಾಳದಲ್ಲಿ 6,487, ಮಧ್ಯ ಪ್ರದೇಶ 2,885 ಮತ್ತು ರಾಜಸ್ಥಾನದಲ್ಲಿ 1,839 ಜನರು ಕೊರೊನಾ ವೈರಸ್‌ನಿಂದ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು