ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 48 ಸಾವಿರ ಹೊಸ ಪ್ರಕರಣ, ಯಾವ ರಾಜ್ಯದಲ್ಲೆಷ್ಟು?

Last Updated 31 ಅಕ್ಟೋಬರ್ 2020, 4:35 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ದೇಶದಾದ್ಯಂತ ಇಂದು 48,268 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 551 ಮಂದಿ ಮೃತಪಟ್ಟಿದ್ದಾರೆ ಮತ್ತು 59,454 ಜನರು ಗುಣಮುಖರಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ 81,37,119 ಮಂದಿಗೆ ಸೋಂಕು ತಗುಲಿದ್ದು, 1,21,641 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 74,32,829 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,82,649 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 16,72,858 ಜನರಿಗೆ ಸೋಂಕು ತಗುಲಿದೆ. 1,25,971 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 15,03,050 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 43,837 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಈವರೆಗೂ 8,20,565 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. 25,514 ಸಕ್ರಿಯ ಪ್ರಕರಣಗಳೊಂದಿಗೆ 7,88,375 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 6,676 ಜನರು ಸಾವಿಗೀಡಾಗಿದ್ದಾರೆ.

ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಒಟ್ಟಾರೆ 8,20,398 ಜನರಿಗೆ ಸೋಂಕು ತಗುಲಿದ್ದು, 11,140 ಜನರು ಸಾವಿಗೀಡಾಗಿದ್ದಾರೆ. 59,518 ಸಕ್ರಿಯ ಪ್ರಕರಣಗಳಿದ್ದು, 7,49,740 ಜನರು ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೂ 7,22,011 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 6,87,388 ಮಂದಿ ಗುಣಮುಖರಾಗಿದ್ದಾರೆ. 23,532 ಸಕ್ರಿಯ ಪ್ರಕರಣಗಳಿದ್ದು, 11,091 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT