ಶುಕ್ರವಾರ, ಆಗಸ್ಟ್ 12, 2022
27 °C

Covid-19 India Update | 69,921 ಹೊಸ ಪ್ರಕರಣ, ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 69,921 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 819 ಮಂದಿ ಮೃತಪಟ್ಟಿದ್ದಾರೆ. 

ಇದರೊಂದಿಗೆ ದೇಶದಲ್ಲಿ ಈವರೆಗೆ 36,91,167 ಮಂದಿಗೆ ಸೋಂಕು ತಗುಲಿದ್ದು, 65,288 ಮಂದಿ ಸಾವಿಗೀಡಾಗಿದ್ದಾರೆ. 28,39,883 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 7,85,996 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್‌ ಮುಂದುವರಿಕೆ

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 30ರವರೆಗೆ ಲಾಕ್‌ಡೌನ್ ವಿಸ್ತರಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 7, 11 ಹಾಗೂ 12ರಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ತಿಳಿಸಿದ್ದಾರೆ.

ಕೇಂದ್ರದ ಅನ್‌ಲಾಕ್‌ 4 ಮಾರ್ಗಸೂಚಿಯನ್ವಯ ರಾಜ್ಯದಲ್ಲಿ ಸೆಪ್ಟಂಬರ್ 8ರಿಂದ ಮೆಟ್ರೋ ರೈಲು ಸೇವೆಯನ್ನು ಆರಂಭಿಸಲಾಗುತ್ತಿದೆ. 

ಮಹಾರಾಷ್ಟ್ರದಲ್ಲಿ ಒಟ್ಟಾರೆ 7,92,541 ಪ್ರಕರಣ

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಈವರೆಗೆ 7,92,541 ಜನರಿಗೆ ಸೋಂಕು ತಗುಲಿದೆ. 1,94,399 ಸಕ್ರಿಯ ಪ್ರಕರಣಗಳಿದ್ದು, 5,73,559 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 24,583 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 4,34,771 ಜನರಿಗೆ ಸೋಂಕು ತಗುಲಿದೆ. 1,00,276 ಸಕ್ರಿಯ ಪ್ರಕರಣಗಳಿದ್ದು, 3,30,526 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,969 ಜನರು ಸಾವಿಗೀಡಾಗಿದ್ದಾರೆ.

ತಮಿಳುನಾಡಿನಲ್ಲಿ ಮೃತರ ಸಂಖ್ಯೆ 7,322ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಈವರೆಗೂ 4,28,041 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 3,68,141 ಮಂದಿ ಗುಣಮುಖರಾಗಿದ್ದಾರೆ. 52,578 ಸಕ್ರಿಯ ಪ್ರಕರಣಗಳಿದ್ದು, 7,322 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ. 

ಕರ್ನಾಟಕದಲ್ಲಿ ಒಟ್ಟಾರೆ 3,42,423 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 87,254 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 2,49,467 ಜನರು ಗುಣಮುಖರಾಗಿದ್ದು, 5,702 ಜನರು ಸಾವಿಗೀಡಾಗಿದ್ದಾರೆ. 

ಉತ್ತರ ಪ್ರದೇಶದಲ್ಲಿ ಈವರೆಗೂ 2,30,414 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 1,72,140 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 54,788 ಸಕ್ರಿಯ ಪ್ರಕರಣಗಳಿದ್ದು, 3,486 ಜನರು ಮೃತಪಟ್ಟಿದ್ದಾರೆ.

ರಾಜಧಾನಿ ದೆಹಲಿಯಲ್ಲಿ 1,74,748 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದುವರೆಗೆ 4,444 ಮಂದಿ ಕೊನೆಯುಸಿರೆಳೆದಿದ್ದಾರೆ. 14,626 ಸಕ್ರಿಯ ಪ್ರಕರಣಗಳಿದ್ದು, 1,55,678 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇನ್ನುಳಿದಂತೆ ಗುಜರಾತ್‌ನಲ್ಲಿ 3,020 ಪಶ್ಚಿಮ ಬಂಗಾಳದಲ್ಲಿ 3,228, ಮಧ್ಯ ಪ್ರದೇಶ 1,394 ಮತ್ತು ರಾಜಸ್ಥಾನದಲ್ಲಿ 1,056 ಜನರು ಕೊರೊನಾ ವೈರಸ್‌ನಿಂದ ಸಾವಿಗೀಡಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು