ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 40 ಲಕ್ಷದತ್ತ ಸೋಂಕಿತರ ಸಂಖ್ಯೆ, 68,472 ಜನ ಸಾವು

Last Updated 4 ಸೆಪ್ಟೆಂಬರ್ 2020, 4:44 IST
ಅಕ್ಷರ ಗಾತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಇಂದು 83,341 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 1,096 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ 39,36,748 ಮಂದಿಗೆ ಸೋಂಕು ತಗುಲಿದ್ದು, 68,472 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 30,37,152 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,31,124 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 8,25,739 ಜನರಿಗೆ ಸೋಂಕು ತಗುಲಿದೆ. 2,02,048 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 5,98,496 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 25,195 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 4,55,531 ಜನರಿಗೆ ಸೋಂಕು ತಗುಲಿದೆ. 1,03,076 ಸಕ್ರಿಯ ಪ್ರಕರಣಗಳೊಂದಿಗೆ 3,48,330 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 4,125 ಜನರು ಸಾವಿಗೀಡಾಗಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೂ 4,39,959 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 3,80,063 ಮಂದಿ ಗುಣಮುಖರಾಗಿದ್ದಾರೆ. 52,380 ಸಕ್ರಿಯ ಪ್ರಕರಣಗಳಿದ್ದು, 7,516 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ ಒಟ್ಟಾರೆ 3,61,341 ಜನರಿಗೆ ಸೋಂಕು ತಗುಲಿದ್ದು, 5,950 ಜನರು ಸಾವಿಗೀಡಾಗಿದ್ದಾರೆ. 94,478 ಸಕ್ರಿಯ ಪ್ರಕರಣಗಳಿದ್ದು, 2,60,913 ಜನರು ಗುಣಮುಖರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಈವರೆಗೂ 2,41,439 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 1,81,364 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 56,459 ಸಕ್ರಿಯ ಪ್ರಕರಣಗಳೊಂದಿಗೆ ಒಟ್ಟಾರೆ 3,616 ಜನರು ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಗುಜರಾತ್‌ನಲ್ಲಿ 3,046, ಪಶ್ಚಿಮ ಬಂಗಾಳದಲ್ಲಿ 3,339, ಮಧ್ಯ ಪ್ರದೇಶ 1,453 ಮತ್ತು ರಾಜಸ್ಥಾನದಲ್ಲಿ 1,081 ಜನರು ಕೊರೊನಾ ವೈರಸ್‌ನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT