ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 60 ಲಕ್ಷ ಸನಿಹಕ್ಕೆ ಸೋಂಕಿತರ ಸಂಖ್ಯೆ

Last Updated 27 ಸೆಪ್ಟೆಂಬರ್ 2020, 5:46 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 88,600 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 1,124 ಜನರು ಸಾವಿಗೀಡಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆಯು 59,92,533 ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದುವರೆಗೂ 49,41,628 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, 9,56,402 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ.ಒಟ್ಟಾರೆ 94,503ಜನರು ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ 13,00,757 ಜನರಿಗೆ ಸೋಂಕು ತಗುಲಿದ್ದರೆ, 9,92,806 ಗುಣಮುಖರಾಗಿದ್ದಾರೆ. ಈವರೆಗೂ 34,761 ಜನರು ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 6,61,458 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 5,88,161 ಜನರು ಗುಣಮುಖರಾಗುವುದರೊಂದಿಗೆ 5,606 ಜನರು ಸಾವಿಗೀಡಾಗಿದ್ದಾರೆ.

ಇನ್ನುಳಿದಂತೆ ತಮಿಳು ನಾಡಿನಲ್ಲಿ 5,69,370, ಕರ್ನಾಟಕದಲ್ಲಿ 5,57,212, ಉತ್ತರ ಪ್ರದೇಶದಲ್ಲಿ 3,78,533 ಮತ್ತು ದೆಹಲಿಯಲ್ಲಿ 2,64,450 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT