ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಕ್ರಿಯ ಪ್ರಕರಣ

Last Updated 5 ಜನವರಿ 2021, 6:00 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 16,375 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 201 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳೆ 29,091 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 65,467 ಮತ್ತು ಎರಡನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 55,471 ಸಕ್ರಿಯ ಪ್ರಕರಣಗಳು ಇವೆ. ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಉತ್ತರ ಪ್ರದೇಶ (12,858) ಮತ್ತು ಕರ್ನಾಟಕ (10,912) ರಾಜ್ಯಗಳು ಇದೆ.

ಈ ಮೂಲಕ ದೇಶದಲ್ಲಿ 1.03 ಕೋಟಿಗೂ ಅಧಿಕ ಜನರಿಗೆ ಸೋಂಕು ತಗುಲಿದೆ. ಈವರೆಗೆ 1,49,850 ಜನರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಾರೆ 99,75,958 ಜನರು ಗುಣಮುಖರಾಗಿದ್ದರೆ, 2,31,036 ಸಕ್ರಿಯ ಪ್ರಕರಣಗಳಿವೆ ಎಂದು ಮಾಹಿತಿ ತಿಳಿಸಿದೆ.

ಜನವರಿ 4ರಂದು 8,96,236 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಈವರೆಗೆ 17.65 ಕೋಟಿ (17,65,31,997) ಜನರ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ಕೊರೊನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಈವರೆಗೆ 19,42,136, ಕರ್ನಾಟಕದಲ್ಲಿ 9,21,938, ಆಂಧ್ರಪ್ರದೇಶದಲ್ಲಿ 8,83,082, ತಮಿಳುನಾಡಿನಲ್ಲಿ 8,20,712 ಮತ್ತು ಕೇರಳದಲ್ಲಿ 7,75,852 ಜನರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT