ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ಪ್ರವಾಸಿ ತಾಣಗಳಲ್ಲಿ ಜನಸಂದಣಿ, ಆರೋಗ್ಯ ಸಚಿವಾಲಯ ಆತಂಕ

Last Updated 9 ಜುಲೈ 2021, 13:17 IST
ಅಕ್ಷರ ಗಾತ್ರ

ನವದೆಹಲಿ: ಜುಲೈ 8ಕ್ಕೆ ಕೊನೆಗೊಂಡಂತೆ ಒಂದು ವಾರದ ಅವಧಿಯಲ್ಲಿ ಕೇಂದ್ರಾಡಳಿತ ಪ್ರದೇಶಗಳು ಸೇರಿ 17 ರಾಜ್ಯಗಳ 66 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 10ಕ್ಕೂ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹೊಸ ಕೋವಿಡ್ ಪ್ರಕರಣಗಳ ಶೇ 80ರಷ್ಟು 15 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಜಿಲ್ಲೆಗಳಲ್ಲಿ ವರದಿಯಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

‘ನಾವು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವುದನ್ನು ಮುಂದುವರಿಸಬೇಕಿದೆ. ಬ್ರಿಟನ್, ರಷ್ಯಾ ಮತ್ತು ಬಾಂಗ್ಲಾದೇಶದಲ್ಲಿ ಕೋವಿಡ್ ಮತ್ತೆ ಉಲ್ಬಣಿಸಿದೆ’ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಹೇಳಿದ್ದಾರೆ.

‘ನಾವು ನಿರ್ಲಕ್ಷ್ಯ ವಹಿಸುವಂತಿಲ್ಲ. ಪ್ರವಾಸಿ ತಾಣಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದು, ಅಂತರ ಕಾಯ್ದುಕೊಳ್ಳುವಿಕೆ ಮತ್ತು ಮಾಸ್ಕ್ ಧರಿಸಿರುವುದು ಕಾಣಿಸುತ್ತಿಲ್ಲ. ಇದು ಕಳವಳಕಾರಿ. ಕೋವಿಡ್ ಮಾರ್ಗಸೂಚಿ ಪಾಲನೆಯಾಗದಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ’ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪಾಲ್ ಹೇಳಿದ್ದಾರೆ.

ಕಳೆದ ವಾರ ದೇಶದಲ್ಲಿ ದೃಢಪಟ್ಟ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಅರ್ಧದಷ್ಟು ಮಹಾರಾಷ್ಟ್ರ ಮತ್ತು ಕೇರಳದಲ್ಲಿ ವರದಿಯಾಗಿವೆ ಎಂದೂ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT