ಶುಕ್ರವಾರ, ಫೆಬ್ರವರಿ 26, 2021
30 °C

ಕೋವಿಡ್‌ನಿಂದ ಸಾವು: ಸರ್ಕಾರಿ ನೌಕರರ ಕುಟುಂಬದವರಿಗೆ ಎಕ್ಸ್‌ಗ್ರೇಷಿಯಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರಪ್ರದೇಶ ಸರ್ಕಾರ ‘ಕೋವಿಡ್‌ 19‘ ನಿಯಂತ್ರಣ ಮತ್ತು ಸೋಂಕಿತರ ಆರೈಕೆ ಮಾಡುವ ಸರ್ಕಾರಿ ನೌಕರರು, ನಗರ ಪಾಲಿಕೆ ಸಿಬ್ಬಂದಿ ಸೇರಿದಂತೆ ಇತರೆ ಎಲ್ಲ ವಿಭಾಗದ ನೌಕರರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರೆ, ಅವರ ಕುಟುಂಬದವರಿಗೆ ₹50 ಲಕ್ಷ ಎಕ್ಸ್ ಗ್ರೇಷಿಯಾ ನೀಡುವ ಅವಕಾಶವನ್ನು ಕಲ್ಪಿಸಿದೆ.

ಮಂಗಳವಾರ ನಡೆದ ವಿಧಾನಸಭೆಯ ಕಲಾಪದಲ್ಲಿ ಸಮಾಜವಾದಿ ಪಕ್ಷದ ಶಾಸಕ ಮೊಹದ್‌ ಫಹೀಮ್ ಇರ್ಫಾನ್ ಈ ಕುರಿತು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಕೊರೊನಾ ನಿಯಂತ್ರಣ ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ಸರ್ಕಾರಿ, ಅರೆ ಸರ್ಕಾರಿ, ನಗರ ಪಾಲಿಕೆಗಳು, ಸ್ವಾಯತ್ತ ಸಂಸ್ಥೆಗಳು, ಗುತ್ತಿಗೆ ಕಾರ್ಮಿಕರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರೆ, ಅವರ ಕುಟುಂಬದವರಿಗೆ ತಲಾ ₹50 ಲಕ್ಷ ಎಕ್ಸ್‌–ಗ್ರೇಷಿಯಾ ನೀಡುವ ಅವಕಾಶ ಕಲ್ಪಿಸಲಾಗಿದೆ‘ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ 2020ರ ಅಕ್ಟೋಬರ್ 26ರವರೆಗೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ 19 ಸಿಬ್ಬಂದಿಯ ಪ್ರತಿ ಕುಟುಂಬಕ್ಕೆ ಸರ್ಕಾರ ₹ 50 ಲಕ್ಷ ನೀಡಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು