ಕೋವಿಡ್‌ನಿಂದಾಗಿ ಸಾವು: ನಕಲಿ ಕ್ಲೇಮುಗಳ ಕುರಿತು ತನಿಖೆಗೆ ‘ಸುಪ್ರೀಂ’ ಅನುಮತಿ

ನವದೆಹಲಿ: ಕೋವಿಡ್‌ನಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರಕ್ಕಾಗಿ ನಕಲಿ ಕ್ಲೇಮುಗಳು ಸಲ್ಲಿಕೆಯಾಗಿರುವ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಅನುಮತಿ ನೀಡಿತು.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.
‘ಮಹಾರಾಷ್ಟ್ರ, ಕೇರಳ, ಗುಜರಾತ್ ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ ಹಾಗೂ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆಗೂ ಭಾರಿ ವ್ಯತ್ಯಾಸ ಇದೆ. ಈ ನಾಲ್ಕು ರಾಜ್ಯಗಳಲ್ಲಿ ಸಲ್ಲಿಕೆಯಾಗಿರುವ ಒಟ್ಟು ಕ್ಲೇಮುಗಳ ಪೈಕಿ ಶೇ 5ರಷ್ಟು ಅರ್ಜಿಗಳನ್ನು ಸರ್ಕಾರ ಪರಿಶೀಲಿಸಬಹುದು’ ಎಂದು ನ್ಯಾಯಪೀಠ ಹೇಳಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.