ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ಗುಂಪು ಸೇರುವುದಕ್ಕೆ ನಿಷೇಧ

Last Updated 22 ಡಿಸೆಂಬರ್ 2021, 13:06 IST
ಅಕ್ಷರ ಗಾತ್ರ

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಬುಧವಾರ ಕಠಿಣ ನಿರ್ಬಂಧಗಳನ್ನು ವಿಧಿಸಿದೆ.

ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಭೆ– ಸಮಾರಂಭಗಳು ಮತ್ತು ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಗಾಗಿ ಗುಂಪು ಸೇರುವುದಕ್ಕೆ ನಿಷೇಧ ಹೇರಲಾಗಿದೆ.

ಕೊರೊನಾ ವೈರಸ್ ಹರಡುವಿಕೆ ತಡೆಗೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಕೆಲಸದ ಸ್ಥಳದಲ್ಲಿ ಮಾಸ್ಕ್ ಇಲ್ಲದೆ ಯಾರಿಗೂ ಪ್ರವೇಶಕ್ಕೆ ಅನುಮತಿ ನೀಡದಂತೆ ಸೂಚಿಸಲಾಗಿದೆ.

'ಎಲ್ಲ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶದ ಸಮೀಕ್ಷೆ ನಡೆಸಬೇಕು. ಕೊರೊನಾ ವೈರಸ್‌ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇರುವ ಮಾರುಕಟ್ಟೆ, ಜನನಿಬಿಡ ಪ್ರದೇಶಗಳ ಬಗ್ಗೆ ಮಾಹಿತಿ ಕಲೆಹಾಕಬೇಕು ಮತ್ತು ನಿರ್ಬಂಧಗಳನ್ನು ಜಾರಿ ಮಾಡಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಸಿಬ್ಬಂದಿ ನಿಯೋಜಿಸುವಂತೆ ಡಿಎಂ ಮತ್ತು ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT