ಬುಧವಾರ, ಜೂನ್ 16, 2021
22 °C
ಸಕ್ರಿಯ ಪ್ರಕರಣಗಳು ಈಗ ಕೇವಲ 71,794

ದೆಹಲಿ: ಎ.10ರ ಬಳಿಕ ಇದೇ ಮೊದಲ ಬಾರಿಗೆ ನಾಲ್ಕಂಕಿಗೆ ಇಳಿದ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹೊಸದಾಗಿ ಕೊರೊನಾ ಸೋಂಕಿಗೆ ಒಳಗಾಗುವವರ ಸಂಖ್ಯೆಯು 10,000ಕ್ಕಿಂತ ಕಡಿಮೆ ದಾಖಲಾಗಿದ್ದು, ಶುಕ್ರವಾರ 8,506 ಜನರಲ್ಲಿ ಸೋಂಕು ದೃಢಪಟ್ಟಿದೆ.

ಇದೇ ವೇಳೆ 14,140 ಜನ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 71,794 ಇಳಿದಿರುವುದು ಆಶಾದಾಯಕ ಬೆಳವಣಿಗೆಗಾಗಿ ಹೊರಹೊಮ್ಮಿದೆ.

ಏಪ್ರಿಲ್‌ 10ರ ನಂತರ ಇದೇ ಮೊದಲ ಬಾರಿಗೆ ಸೋಂಕು ದೃಢಪಟ್ಟವರ ಸಂಖ್ಯೆಯು ನಾಲ್ಕಿಂಕಿಗೆ ಇಳಿದಿರುವುದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: 

ಶುಕ್ರವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟ 68,575 ಜನರ ಪೈಕಿ ಶೇ 12.40ರ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ.

ಇದೇ ಅವಧಿಯಲ್ಲಿ 289 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕು ಹರಡುತ್ತಿರುವ ಪ್ರಮಾಣ ಕಡಿಮೆ ಆಗುತ್ತಿದ್ದರೂ, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬಾರದಿರುವುದು ಆತಂಕವನ್ನು ಹೆಚ್ಚಿಸಿದೆ.

ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ 40ರಿಂದ 50ರಷ್ಟು ಕಡಿಮೆ ಆಗುತ್ತಿದೆಯಾದರೂ, ಕಳೆದ 10 ದಿನಗಳ ಅವಧಿಯಲ್ಲಿ 3,539 ಜನ ಪ್ರಾಣ ಕಳೆದುಕೊಂಡಿದ್ದಾರೆ.

ತಗ್ಗಿದ ಆಮ್ಲಜನಕ ಬೇಡಿಕೆ:
ಏಪ್ರಿಲ್‌ 19ರಿಂದ ಜಾರಿಯಾಗಿರುವ ಲಾಕ್‌ಡೌನ್‌ ಪರಿಣಾಮ ಸಾರ್ವಜನಿಕರ ಮುಕ್ತ ಓಡಾಟಕ್ಕೆ ಕಡಿವಾಣ ಬಿದ್ದಿದ್ದು, ಸೋಂಕಿನ ಸರಪಳಿ ಬೆಳೆಯದಿರುವುದಕ್ಕೆ ಕಾರಣವಾಗಿದೆ.

ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಬೇಡಿಕೆ ತಗ್ಗಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ದೊರೆಯದೇ ತಲೆದೋರಿದ್ದ ಹಾಹಾಕಾರವೂ ಕಡಿಮೆಯಾಗಿದೆ.

ಕೊರೊನಾ ಪೀಡಿತರಿಗಾಗಿ ಕೇಂದ್ರ ಸರ್ಕಾರವು ದೆಹಲಿಗೆ ಹಂಚಿಕೆ ಮಾಡಿದ್ದ ಆಮ್ಲಜನಕವನ್ನು ಅಗತ್ಯ ರಾಜ್ಯಗಳಿಗೆ ಪೂರೈಸುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು