ಸೋಮವಾರ, ಜೂನ್ 27, 2022
26 °C

ಕೋವಿಡ್-19: ಗೋವಾದಲ್ಲಿ ಕರ್ಫ್ಯೂ ಜೂ.14ರ ವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಗೋವಾದಲ್ಲಿ ಹೇರಲಾಗಿರುವ ಕರ್ಫ್ಯೂ ಅನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಜೂನ್ 14 ಬೆಳಗ್ಗೆ 7 ಗಂಟೆಯ ವರೆಗೆ ಕರ್ಫ್ಯೂ ಮುಂದುವರಿಸಲಾಗುವುದು ಎಂದಿದ್ದಾರೆ.

 

 

 

ಅವಶ್ಯ ವಸ್ತುಗಳ ಅಂಗಡಿಗಳು ಪ್ರತಿದಿನ ಬೆಳಗ್ಗೆ 7ರಿಂದ ಮಧ್ಯಾಹ್ನ 3 ವರೆಗೆ ತರೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: 

 

ಮನೆ, ಕಟ್ಟಡ ರಿಪೇರಿ, ಮಾನ್ಸೂನ್ ಸನ್ನದ್ಧತೆ ಹಾಗೂ ರಕ್ಷಣೆಗೆ ಸಂಬಂಧಿಸಿದ ಅಂಗಡಿ ಮತ್ತು ಸ್ಟೇಷನರಿಗಳಿಗೆ ತೆರೆಯಲು ಅವಕಾಶವಿರುತ್ತದೆ ಎಂದವರು ತಿಳಿಸಿದ್ದಾರೆ.

ಗೋವಾದಲ್ಲಿ ರಾಜ್ಯವ್ಯಾಪಿ ಕರ್ಫ್ಯೂ ಜೂನ್ 7ರಂದು ಬೆಳಗ್ಗೆ 7 ಗಂಟೆಗೆ ಕೊನೆಗೊಳ್ಳಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಮತ್ತೆ ವಿಸ್ತರಿಸಲು ನಿರ್ಧರಿಸಲಾಗಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು