ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಕೋ-ವಿನ್' ಹ್ಯಾಕ್ ವರದಿಗಳು ಸುಳ್ಳು, ಡೇಟಾ ಸೋರಿಕೆಯಾಗಿಲ್ಲ: ಕೇಂದ್ರ

Last Updated 11 ಜೂನ್ 2021, 4:49 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನಕ್ಕಾಗಿ ಪ್ರಾರಂಭಿಸಿರುವ ಕೋ-ವಿನ್ ವೆಬ್‌ಸೈಟ್ ಹ್ಯಾಕ್ ಆಗಿದೆ ಎಂಬುದು ಸುಳ್ಳು ವದಂತಿಯಾಗಿದ್ದು, ಯಾವುದೇ ಡೇಟಾ ಸೋರಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತು ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಕೇಂದ್ರ, ಈ ವರದಿಗಳೆಲ್ಲ ನಕಲಿ, ಸುರಕ್ಷಿತ ಡಿಜಿಟಲ್ ವ್ಯವಸ್ಥೆಯಲ್ಲಿ ಪೋರ್ಟಲ್‌ ಎಲ್ಲ ವ್ಯಾಕ್ಸಿನೇಷನ್ ಡೇಟಾವನ್ನು ಸಂಗ್ರಹಿಸಿಡುತ್ತದೆ ಎಂದು ಹೇಳಿದೆ.

ಈ ಮೊದಲು ಕೋ-ವಿನ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದು ಆಧಾರರಹಿತ ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಗಿದ್ದರೂ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಸಚಿವಾಲಯದ (ಎಂಐಇಟಿವೈ) ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡವು ಪರಿಶೀಲಿಸಲಿದೆ ಎಂದು ಲಸಿಕಾ ಉಸ್ತುವಾರಿ ತಂಡ (ಇಜಿವಿಎಸಿ) ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೋವಿಡ್-19 ನಿಯಂತ್ರಣ ಕುರಿತ ದತ್ತಾಂಶ ನಿರ್ವಹಣೆ ಮತ್ತು ತಂತ್ರಜ್ಞಾನದ ಉನ್ನತ ಸಮಿತಿ ಅಧ್ಯಕ್ಷ ಡಾ. ಆರ್.ಎಸ್. ಶರ್ಮಾ, 'ಕೋ-ವಿನ್ ವ್ಯವಸ್ಥೆ ಹ್ಯಾಕ್ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿರುವ ಸುದ್ದಿ ನಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೋ-ವಿನ್, ಎಲ್ಲ ವ್ಯಾಕ್ಸಿನೇಷನ್ ಡೇಟಾವನ್ನು ಸುರಕ್ಷಿತ ಡಿಜಿಟಲ್ ವ್ಯವಸ್ಥೆಯಲ್ಲಿ ಸಂಗ್ರಹಿಸಿಡುತ್ತದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಕೋ-ವಿನ್ ಡೇಟಾ ಹೊರಗಡೆ ಹಂಚಿಕೊಂಡಿಲ್ಲ. ಫಲಾನುವಿಗಳ ಸ್ಥಳ ಮಾಹಿತಿ ಸೋರಿಕೆಯಾಗಿದೆ ಎಂಬ ವರದಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಮಾಹಿತಿಯನ್ನು ಕೋ-ವಿನ್‌ ಪೋರ್ಟಲ್‌ನಲ್ಲಿ ಸಂಗ್ರಹಿಸಲಾಗುತ್ತಿಲ್ಲ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT