ಶುಕ್ರವಾರ, ಫೆಬ್ರವರಿ 26, 2021
20 °C

ಕೋವಿಡ್-19 ಆಸ್ಪತ್ರೆ: ಅಗ್ನಿ ಸುರಕ್ಷತೆ ಆಡಿಟ್ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರತಿ ಜಿಲ್ಲೆಯ ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ತಿಂಗಳಿಗೊಮ್ಮೆ ಕಡ್ಡಾಯವಾಗಿ ಅಗ್ನಿ ಸುರಕ್ಷತೆ ಆಡಿಟ್ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಜತೆಗೆ, ಅಗ್ನಿ ಸುರಕ್ಷತೆ ನಿರ್ವಹಣೆಯ ಲೋಪದೋಷ ನಿವಾರಣೆಗೆ ಏನು ಕ್ರಮ ತೆಗೆದುಕೊಳ್ಳಬಹುದು ಎಂಬ ಬಗ್ಗೆ ವರದಿ ನೀಡುವಂತೆಯೂ ಸೂಚಿಸಿದೆ.

‘ಪ್ರತಿ ಕೋವಿಡ್ ಆಸ್ಪತ್ರೆಯಲ್ಲಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿಕೊಳ್ಳಬೇಕು. ಎಲ್ಲಾ ಅಗ್ನಿಶಾಮಕ ಸುರಕ್ಷತಾ ಕ್ರಮಗಳ ಪಾಲನೆಯನ್ನು ಖಾತರಿಪಡಿಸುವ ಜವಾಬ್ದಾರಿ ಈ ಅಧಿಕಾರಿಯ ಮೇಲಿರುತ್ತದೆ’ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ತಿಳಿಸಿತು.

ಕೋವಿಡ್ ಆಸ್ಪತ್ರೆಗಳು ಆಯಾ ರಾಜ್ಯಗಳ ಅಗ್ನಿಶಾಮಕ ಇಲಾಖೆಯಿಂದ ಎನ್‌ಒಸಿ ಪಡೆಯುವುದು ಕಡ್ಡಾಯ. ಈವರೆಗೆ ಪಡೆದಿಲ್ಲವಾದರೆ, ತಕ್ಷಣವೇ ಅರ್ಜಿ ಹಾಕಬೇಕು ಎಂದು ಕೋರ್ಟ್‌ ತಿಳಿಸಿದೆ. ‘ಒಂದು ವೇಳೆ, ಕೋವಿಡ್ ಆಸ್ಪತ್ರೆಯಲ್ಲಿ ಎನ್‌ಒಸಿ ಇಲ್ಲದಿದ್ದರೆ ಅಥವಾ ಅದು ನವೀಕರಣ ಆಗದಿದ್ದಲ್ಲಿ ರಾಜ್ಯಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರ್ಟ್ ಎಚ್ಚರಿಸಿದೆ.

ನ. 26ರಂದು ರಾಜ್‌ಕೋಟ್‌ನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡ ಪ್ರಕರಣವನ್ನು ಕೋರ್ಟ್ ಸ್ವಯಂಪ್ರೇರಿತ ವಿಚಾರಣೆಗೆ ಕೈಗೆತ್ತಿಕೊಂಡಿದೆ. ನ್ಯಾಯ ಮೂರ್ತಿ ಡಿ.ಎ. ಮೆಹ್ತಾ ಆಯೋಗ ಈ ಬಗ್ಗೆ ತನಿಖೆ ನಡೆಸುತ್ತಿದೆ. ಆಗಸ್ಟ್‌ನಲ್ಲಿ ಅಹಮದಾಬಾದ್‌ನ ಶ್ರೇಯ್ ಆಸ್ಪತ್ರೆಯಲ್ಲಿ ನಡೆದ ಅವಘಡದಲ್ಲಿ 8 ರೋಗಿ ಗಳು ಮೃತಪಟ್ಟಿದ್ದರು. ರಾಜ್‌ಕೋಟ್‌ನ ಉದಯ್ ಶಿವಾನಂದ ಆಸ್ಪತ್ರೆಯ ಅಗ್ನಿಅವಘಡಕ್ಕೆ ಐವರು ಬಲಿಯಾದ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಮಿತಿಗೆ ಕೋರ್ಟ್ ಸೂಚಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು