ಭಾನುವಾರ, ಮೇ 16, 2021
22 °C
ದೇಶದಲ್ಲಿ 1.5 ಕೋಟಿ ದಾಟಿದ ಸೋಂಕಿತರ ಸಂಖ್ಯೆ, 1.78 ಲಕ್ಷಕ್ಕೆ ಏರಿದ ಸಾವಿನ ಸಂಖ್ಯೆ

Covid-19 India Update: 2.73 ಲಕ್ಷ ಹೊಸ ಪ್ರಕರಣ, 1,619 ಮಂದಿ ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿದ್ದು, ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 2,73,810 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 1.50 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 1,50,61,919ಕ್ಕೆ ಏರಿದೆ. ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ 1,619 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಒಟ್ಟು ಸಂಖ್ಯೆ 1,78,769ಕ್ಕೆ ಏರಿದೆ.

ದೇಶದಲ್ಲಿ ಕಳೆದ 40 ದಿನಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಪ್ರಸ್ತುತ ದೇಶದಲ್ಲಿ 19,29,329 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಗುಣಮುಖರಾಗುತ್ತಿರುವ ಪ್ರಮಾಣ ಶೇ 86ಕ್ಕೆ ಇಳಿದಿದೆ. ಸಾವಿನ ಪ್ರಮಾಣವೂ ಶೇ 1.19ಕ್ಕೆ ಇಳಿದಿದೆ. 1,29,53,821 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಕಳೆದ ವರ್ಷ ಆಗಸ್ಟ್ 7 ರಂದು ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 20 ಲಕ್ಷದಷ್ಟಿತ್ತು.  ಆಗಸ್ಟ್‌ 23ಕ್ಕೆ 30 ಲಕ್ಷ, ಸೆಪ್ಟೆಂಬರ್ 5ಕ್ಕೆ 40 ಲಕ್ಷ, ಸೆಪ್ಟೆಂಬರ್ 16ಕ್ಕೆ 50 ಲಕ್ಷ, ಸೆಪ್ಟೆಂಬರ್ 28ಕ್ಕೆ 60 ಲಕ್ಷ ದಾಟಿತು. ಅಕ್ಟೋಬರ್ 11ರಂದು 70 ಲಕ್ಷ,  ಅಕ್ಟೋಬರ್ 29ರಂದು 80 ಲಕ್ಷ, ನವೆಂಬರ್‌ 20ಕ್ಕೆ 90 ಲಕ್ಷ ಹಾಗೂ  ಡಿಸೆಂಬರ್ 19ಕ್ಕೆ ಒಂದು ಕೋಟಿ ಗಡಿ ದಾಟಿತ್ತು.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಪ್ರಕಾರ ಏಪ್ರಿಲ್ 18 ರವರೆಗೆ 26,78,94,549 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾನುವಾರ ಒಂದೇ ದಿನ 13,56,133 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು