ಬುಧವಾರ, ಮಾರ್ಚ್ 29, 2023
23 °C

COVID-19 | 5 ದೇಶಗಳ ಪ್ರಯಾಣಿಕರಿಗೆ ಆರ್‌ಟಿ–ಪಿಸಿಆರ್ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಂಧಿನಗರ/ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಸಿಂಗಪುರ ಹಾಗೂ ಥಾಯ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಕೊರೊನಾ ಸೋಂಕು ಪತ್ತೆ ಹಚ್ಚುವ ಆರ್‌ಟಿ–ಪಿಸಿಆರ್‌ ಪರೀಕ್ಷೆ ಯನ್ನು ಕೇಂದ್ರ ಸರ್ಕಾರ ಕಡ್ಡಾಯ ಗೊಳಿಸಿದೆ. 

ಗಾಂಧಿನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ವಿದೇಶದಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್‌ ಮಾಡಲಾಗುವುದು. ಸೋಂಕು ದೃಢ ಪಟ್ಟ ಅಥವಾ ಜ್ವರದ ಲಕ್ಷಣಗಳು ಕಾಣಿಸಿ ಕೊಂಡ ಪ್ರಯಾಣಿಕರನ್ನು ಕ್ವಾರಂಟೈನ್‌ ನಲ್ಲಿ ಇರಿಸಲಾಗುವುದು ಎಂದರು.

ಈ ಐದೂ ದೇಶಗಳಿಂದ ಬರುವ ಪ್ರಯಾಣಿಕರು ‘ಏರ್ ಸುವಿಧಾ’  ಪೋರ್ಟಲ್‌ನಲ್ಲಿ ತಮ್ಮ ಆರೋಗ್ಯ ಮಾಹಿತಿ ಭರ್ತಿ ಮಾಡುವು ದನ್ನು ಮತ್ತೆ ಕಡ್ಡಾಯ ಮಾಡಲಾಗಿದೆ. ಇವರು ಮುಂಚಿತವಾಗಿಯೇ ಆರ್‌ಟಿ–ಪಿಸಿಆರ್ ಪ್ರಮಾಣಪತ್ರವನ್ನು ಅಪ್‌ ಲೋಡ್ ಮಾಡಬೇಕು ಎಂದು ಸಚಿವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು