ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India update: ಹೊಸದಾಗಿ 1,190 ಪ್ರಕರಣ ದೃಢ

Last Updated 2 ನವೆಂಬರ್ 2022, 6:00 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,190 ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 16,243ಕ್ಕೆ ಇಳಿಕೆಯಾಗಿದೆ. ಈವರೆಗೆ ಒಟ್ಟು 4,41,09,133 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,46,55,828 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,452 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.04 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.78 ಆಗಿದೆ.

ದೇಶದಲ್ಲಿ ಈವರೆಗೆ 219.66 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT