ನವದೆಹಲಿ: ‘ದೇಶದಲ್ಲಿ 43,393 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಪ‍್ರಕರಣಗಳ ಸಂಖ್ಯೆ 3,07,52,950ಕ್ಕೆ ಏರಿಕೆಯಾಗಿದೆ. ಆದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,58,727ಕ್ಕೆ ಇಳಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಶುಕ್ರವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 911 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 4,05,939ಕ್ಕೆ ಏರಿದೆ.

ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 1.49ರಷ್ಟು ಪಾಲನ್ನು ಸಕ್ರಿಯ ಪ್ರಕರಣಗಳು ಹೊಂದಿವೆ. ಇನ್ನೊಂದೆಡೆ ದೇಶದಲ್ಲಿ ಚೇತರಿಕೆ ಪ್ರಮಾಣವು ಶೇಕಡ 97.19ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1,977 ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಎಂದು ದತ್ತಾಂಶಗಳು ಹೇಳಿವೆ.

‘ಗುರುವಾರ 17,90,708 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 42,70,16,605 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 2.42ರಷ್ಟಿದೆ. ಸತತ 18ನೇ ದಿನ ಸೋಂಕು ದೃಢ ಪ್ರಮಾಣವು ಶೇಕಡ 3ಕ್ಕಿಂತ ಕಡಿಮೆಯಿದೆ’ ಎಂದು ಸಚಿವಾಲಯವು ತಿಳಿಸಿದೆ.

ದೇಶದಲ್ಲಿ ಈವರೆಗೆ 2,98,88,284 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೇ ವೇಳೆ ಮರಣ ದರವು ಶೇಕಡ 1.32ರಷ್ಟಿದೆ. 36.89 ಕೋಟಿ ಡೋಸ್ ಲಸಿಕೆಯನ್ನು ದೇಶದಾದ್ಯಂತ ವಿತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.