ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 147 ದಿನಗಳಲ್ಲೇ ಅತಿ ಕಡಿಮೆ ಪ್ರಕರಣ

Last Updated 10 ಆಗಸ್ಟ್ 2021, 5:41 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 28,204 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದು 147 ದಿನಗಳಲ್ಲೇ ಅತಿ ಕಡಿಮೆಯಾಗಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,19,98,158 ತಲುಪಿದೆ. 24 ಗಂಟೆ ಅವಧಿಯಲ್ಲಿ 373 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 4,28,682ಕ್ಕೆ ಏರಿಕೆಯಾಗಿದೆ.

ಸದ್ಯ 3,88,508 ಸಕ್ರಿಯ ಪ್ರಕರಣಗಳಿವೆ. ಇದೂ ಕೂಡ 139 ದಿನಗಳಲ್ಲೇ ಅತಿ ಕಡಿಮೆಯಾಗಿದೆ.

ಕೋವಿಡ್ ಚೇತರಿಕೆ ಪ್ರಮಾಣ ಈವರೆಗಿನ ಗರಿಷ್ಠ ಪ್ರಮಾಣ ತಲುಪಿದ್ದು, ಶೇ 97.45 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಒಟ್ಟು ಪ್ರಕರಣಗಳ ಶೇ 1.21ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT