ಸೋಮವಾರ, ಅಕ್ಟೋಬರ್ 26, 2020
28 °C

Covid-19 India Update: ನಾಗಾಲ್ಯಾಂಡ್‌ನಲ್ಲಿ 42 ಭದ್ರತಾ ಸಿಬ್ಬಂದಿಗೆ ಕೋವಿಡ್

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭದ್ರತಾ ಪಡೆಯ 42 ಸಿಬ್ಬಂದಿ ಸೇರಿ ನಾಗಾಲ್ಯಾಂಡ್‌ನಲ್ಲಿ 123 ಮಂದಿ ಕೋವಿಡ್‌–19 ದೃಢಪಟ್ಟ ಪ್ರಕರಣಗಳು ದಾಖಲಾಗಿವೆ.  ನಾಗಾಲ್ಯಾಂಡ್‌ನಲ್ಲಿ ಒಟ್ಟು 6,552 ಪ್ರಕರಣಗಳು ವರದಿಯಾಗಿವೆ.

ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌ ದೃಢಪಟ್ಟ 8,553 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ 23 ಮಂದಿ ಸಾವಿಗೀಡಾಗಿದ್ದಾರೆ. ಸೆಪ್ಟೆಂಬರ್‌ ಕೊನೆಯ ವಾರದಿಂದ ಕೇರಳದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ಈವರೆಗೂ ಒಟ್ಟು 2,28,886 ಪ್ರಕರಣಗಳು ವರದಿಯಾಗಿವೆ. ಆ ಪೈಕಿ 1,44,471 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸೋಂಕಿನಿಂದ 836 ಮಂದಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲಿ 6,242 ಪ್ರಕರಣಗಳು, ಕರ್ನಾಟಕದಲ್ಲಿ 10,145, ತಮಿಳುನಾಡಿನಲ್ಲಿ 5,489 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 5,226, ದೆಹಲಿಯಲ್ಲಿ 2,683 ಹೊಸ ಪ್ರಕರಣಗಳು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ 878 ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ 75,829 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಈವರೆಗೆ 65,49,374 ಮಂದಿಗೆ ಸೋಂಕು ತಗುಲಿದ್ದು, 1,01,782 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 55,09,967 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,37,625 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಅಕ್ಟೋಬರ್ 3ರ ವರೆಗೆ ಒಟ್ಟು 7,89,92,534 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 11,42,131 ಮಾದರಿಗಳನ್ನು ಶನಿವಾರ ಪರೀಕ್ಷಿಸಲಾಯಿತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಕೇಂದ್ರಬಿಂದುವಾಗಿರುವ ಮಹಾರಾಷ್ಟ್ರದಲ್ಲಿ ಒಟ್ಟು 14,30,861 ಜನರಿಗೆ ಸೋಂಕು ತಗುಲಿದೆ. 2,58,108 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 11,34,555 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ 37,758 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು