ಶನಿವಾರ, ಸೆಪ್ಟೆಂಬರ್ 25, 2021
30 °C

Covid-19 India Update: ಕೋವಿಡ್ ಪ್ರಕರಣ ಮತ್ತೆ ಹೆಚ್ಚಳ, 44,230 ಮಂದಿಗೆ ಸೋಂಕು

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ ಪ್ರಕರಣಗಳಲ್ಲಿ ಮತ್ತೆ ತುಸು ಹೆಚ್ಚಳವಾಗಿದ್ದು, ಶುಕ್ರವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 44,230 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 555 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೆ 3,15,72,344 ಮಂದಿ ಸೋಂಕಿತರಾಗಿದ್ದು, ಮೃತರ ಸಂಖ್ಯೆ 4,23,217ಕ್ಕೆ ತಲುಪಿದೆ. ಒಟ್ಟು 3,07,43,972 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 4,05,155 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಶೇ 1.28ರಷ್ಟಾಗಿದೆ. 42,360 ಸೋಂಕಿತರು ಗುಣಮುಖರಾಗುವ ಮೂಲಕ ಚೇತರಿಕೆ ಪ್ರಮಾಣ ಶೇ 97.38ರಷ್ಟಾಗಿದೆ.

ಪಾಸಿಟಿವಿಟಿ ಪ್ರಮಾಣ ಏರಿಕೆ: ದೈನಂದಿನ ಮತ್ತು ವಾರದ ಪಾಸಿಟಿವಿಟಿ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.44ಕ್ಕೆ ಏರಿಕೆಯಾಗಿದ್ದು, ವಾರದ ಪ್ರಮಾಣ ಶೇ 2.43ಕ್ಕೆ ತಲುಪಿದೆ.

ಈವರೆಗೆ ಒಟ್ಟು 45,60,33,754 ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು