ಭಾನುವಾರ, ಮಾರ್ಚ್ 7, 2021
32 °C

Covid-19 India Update: 13,788 ಹೊಸ ಪ್ರಕರಣ; 14,457 ಸೋಂಕಿತರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,788 ಜನರಲ್ಲಿ ಕೋವಿಡ್‌–19 ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,05,71,773ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. ಇದೇ ವೇಳೆ 145 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,52,419ಕ್ಕೆ ತಲುಪಿದೆ.

ಸಚಿವಾಲಯದ ಮಾಹಿತಿ ಪ್ರಕಾರ ಭಾನುವಾರ ಗುಣಮುಖರಾದ 14,457 ಸೋಂಕಿತರೂ ಸೇರಿದಂತೆ ಈ ವರೆಗೆ ಒಟ್ಟು 1,02,11,342 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಪ್ರಮಾಣ ಶೇ. 96.59ಕ್ಕೆ ತಲುಪಿದ್ದರೆ, ಸಾವಿನ ದರ ಶೇ. 1.44ಕ್ಕೆ ಇಳಿದಿದೆ.

ದೇಶದಲ್ಲಿ ಇನ್ನೂ 2,08,012 ಸಾವಿರ ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಕೇರಳ (69,209) ಮತ್ತು ಮಹಾರಾಷ್ಟ್ರದಲ್ಲಿ (53,852) ಇವೆ ಎಂಬುದು ಗಮನಿಸಬೇಕಾದ ವಿಚಾರ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು