ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 34,403 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದೆರಡು ದಿನಗಳಿಗೆ ಹೋಲಿಸಿದಾಗ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರದಂದು 30,570 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು.
ಇದನ್ನೂ ಓದಿ:ಕೋವಿಡ್: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ
ಹಾಗಿದ್ದರೂ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಮುಖವಾಗಿದೆ. ಕಳೆದ 24 ತಾಸಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 8,164 ಇಳಿಕೆಯಾಗಿದ್ದು, 3,39,056ಕ್ಕೆ ತಲುಪಿದೆ.
ಅದೇ ಹೊತ್ತಿಗೆ ಕಳೆದ 24 ತಾಸಿನಲ್ಲಿ 320 ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು 3,25,98,424 ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣ ಶೇ 97.65ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ. 1.97 ಆಗಿದೆ.
ಈವರೆಗೆ 77.24 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.