ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಕೋವಿಡ್‌ ಚೇತರಿಕೆ ದರ ಶೇಕಡಾ 92.79ಕ್ಕೆ ಏರಿಕೆ

ದೇಶದಲ್ಲಿ ಕೊರೊನಾ ಪ್ರಕರಣಗಳ ಇಳಿಕೆ
Last Updated 11 ನವೆಂಬರ್ 2020, 16:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ಸಕ್ರಿಯ ಪ್ರಕರಣಗಳಲ್ಲಿ ಭಾರಿ ಇಳಿಕೆಯಾಗಿದ್ದು, 5 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. 24 ಗಂಟೆ ಅವಧಿಯಲ್ಲಿ 44,281 ಹೊಸ ಪ್ರಕರಣಗಳು ದೃಢಪಟ್ಟಿದ್ದು, 512 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ. ಈವರೆಗೆ 1,27,571 ಸೋಂಕಿತರು ಅಸುನೀಗಿದ್ದಾರೆ.

50,326 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 80,13,784 ಮಂದಿ ಚೇತರಿಸಿಕೊಂಡಂತಾಗಿದೆ. ಸದ್ಯ 4,94,657 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ಚೇತರಿಕೆ ದರ92.79ಕ್ಕೆ ಏರಿದೆ.

106 ದಿನಗಳ ಬಳಿಕ ಇದೇ ಮೊದಲ ಬಾರಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕೆಳಗಿಳಿದಿದೆ. ಅನೇಕ ದೇಶಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಈ ವಿಚಾರ ಮಹತ್ವದ್ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಮಹಾರಾಷ್ಟ್ರದಲ್ಲಿ ಬುಧವಾರ 4,907 ಕೊರೊನಾ ವೈರಸ್ ಪ್ರಕರಣ ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 17,31, 833ಕ್ಕೇರಿದೆ.145 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 45,560 ಆಗಿದೆ ಎಂದು ರಾಜ್ಯ ಆರೋಗ್ಯಇಲಾಖೆ ಹೇಳಿದೆ.

ಆಂಧ್ರ ಪ್ರದೇಶದಲ್ಲಿ 1,732 ಹೊಸ ಪ್ರಕರಣಗಳುವರದಿಯಾಗಿವೆ.8,20 ,234 ಮಂದಿ ಚೇತರಿಸಿಕೊಂಡಿದ್ದು ಮೃತಪಟ್ಟವರ ಸಂಖ್ಯೆ 6,828 ಆಗಿದೆ.

ಕೇರಳದಲ್ಲಿ 7,007 ಹೊಸ ಪ್ರಕರಣಗಳು ವರದಿ ಆಗಿದೆ. ಒಟ್ಟು78, 420 ಸಕ್ರಿಯ ಪ್ರಕರಣಗಳು ಇಲ್ಲಿವೆ. ಅದೇ ವೇಳೆ ಮುಂಬರುವ ಸ್ಥಳೀಯ ಚುನಾವಣೆಗಳ ಮತದಾನ ನಡೆಯುವಾಗ ಕ್ವಾರಂಟೈನ್‌ನಲ್ಲಿರುವರು, ಕೋವಿಡ್ ರೋಗಿಗಳಿಗೆ ಮತ ಚಲಾಯಿಸಲು ಕೊನೆಯ ಒಂದು ಗಂಟೆ ಮೀಸಲಿರಿಸಲು ಕೇರಳ ಸರ್ಕಾರ ನಿರ್ಧರಿಸಿದೆ.

ರಾಜಸ್ಥಾನದಲ್ಲಿ 2,080 ಹೊಸ ಪ್ರಕರಣಗಳು ದಾಖಲಾಗಿದ್ದು 11 ಮಂದಿ ಬುಧವಾರ ಮೃತಪಟ್ಟಿದ್ದಾರೆ. 1,801 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 2,17, 151 ಆಗಿದ್ದು, 2,019 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,993 ಆಗಿದೆ.

ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆ ಆಗಿದ್ದು ಮರಣ ದರ ಶೇ.2.6ರಿಂದ ಶೇ.3.5ಕ್ಕೇರಿದೆ. ಇತ್ತೀಚಿನ ದಿನಗಳಲ್ಲಿ ಮಣಿಪುರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಹೇಳಿದ್ದಾರೆ.

ನಾಗಾಲ್ಯಾಂಡ್‌ನಲ್ಲಿ 42 ಹೊಸ ಪ್ರಕರಣಗಳು ಮತ್ತು 90 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ನಾಗಾಲ್ಯಾಂಡ್ ಆರೋಗ್ಯ ಸಚಿವ ಎಸ್ ಪಂಗ್ಯುನ್ ಫೋಂ ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದ 49 ಪೊಲೀಸರಿಗೆ ಕೋವಿಡ್ ದೃಢಪಟ್ಟಿದೆ.ಪೊಲೀಸ್ ಇಲಾಖೆಯಲ್ಲಿ 27,104 ಮಂದಿ ಸೋಂಕಿತರಾಗಿದ್ದು 1,143 ಸಕ್ರಿಯ ಪ್ರಕರಣಗಳು ಇವೆ, 25, 679 ಪೊಲೀಸರು ಚೇತರಿಸಿಕೊಂಡಿದ್ದು ಇಲ್ಲಿವರೆಗೆ 288 ಮಂದಿ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ

ನವೆಂಬರ್ 10ರ ವರೆಗೆ 12,07,69,151 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 11,53,294 ಮಾದರಿಗಳನ್ನು ನಿನ್ನೆ (ನವೆಂಬರ್ 11) ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT