ಬುಧವಾರ, ಮೇ 12, 2021
19 °C

Covid-19 India Update: ಸತತ 3ನೇ ದಿನ ದೇಶದಲ್ಲಿ ಎರಡು ಲಕ್ಷಕ್ಕೂ ಅಧಿಕ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಸತತ ಮೂರನೇ ದಿನವೂ 2 ಲಕ್ಷಕ್ಕಿಂತ ಹೆಚ್ಚು ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 1,45,26,609ಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೇದ 24 ಗಂಟೆಗಳಲ್ಲಿ ಬರೋಬ್ಬರಿ 2,34,692 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ವೇಳೆ 1,341 ಸೋಂಕಿತರು ಮೃತಪಟ್ಟಿದ್ದಾರೆ. 1,23,354 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ ಒಟ್ಟು 1,26,71,220 ಸೋಂಕಿತರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ. ಇನ್ನೂ  16,79,740 ಪ್ರಕರಣಗಳು ಸಕ್ರಿಯವಾಗಿವೆ.

ಕಳೆದ 24 ಗಂಟೆಗಳಲ್ಲಿ (30,04,544 ) ನೀಡಿರುವುದೂ ಸೇರಿ ಈವರೆಗೆ ಒಟ್ಟು 11,99,37,641 ಜನರಿಗೆ ಲಸಿಕೆ ಹಾಕಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು