ಬುಧವಾರ, ಆಗಸ್ಟ್ 17, 2022
29 °C

Covid-19 India Update: ಕೇರಳದಲ್ಲಿ 57,757 ಸಕ್ರಿಯ ಪ್ರಕರಣಗಳು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Covid antigen test

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಕೋವಿಡ್‌–19 ದೃಢಪಟ್ಟ 5,218 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 5,066 ಮಂದಿ ಗುಣಮುಖರಾಗಿದ್ದಾರೆ ಹಾಗೂ 33 ಮಂದಿ ಸಾವಿಗೀಡಾಗಿದ್ದಾರೆ.

ಕೇರಳದಲ್ಲಿ ಸೋಂಕಿನಿಂದ ಈವರೆಗೂ 6,16,666 ಮಂದಿ ಗುಣಮುಖರಾಗಿದ್ದಾರೆ ಹಾಗೂ ಪ್ರಸ್ತುತ 57,757 ಸಕ್ರಿಯ ಪ್ರಕರಣಗಳಿವೆ.

ದೆಹಲಿಯಲ್ಲಿ 1,617 ಹೊಸ ಪ್ರಕರಣಗಳು ದಾಖಲಾಗಿವೆ, 14,480 ಸಕ್ರಿಯ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 1,132 ಪ್ರಕರಣಗಳು ವರದಿಯಾಗಿವೆ ಹಾಗೂ 1,210 ಮಂದಿ ಗುಣಮುಖರಾಗಿದ್ದಾರೆ. 9,951 ಸಕ್ರಿಯ ಪ್ರರಕಣಗಳಿವೆ.

ರಾಜಸ್ಥಾನದಲ್ಲಿ 1,045, ಉತ್ತರಾಖಂಡದಲ್ಲಿ 496, ಆಂಧ್ರ ಪ್ರದೇಶದಲ್ಲಿ 500 ಹೊಸ ಪ್ರಕರಣಗಳು ದಾಖಲಾಗಿವೆ.

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 34,477 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಈವರೆಗೆ 94,22,636 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಒಂದೇ ದಿನ 22,065 ಮಂದಿಗೆ ಸೋಂಕು ತಗುಲಿದ್ದು, 354 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 1,43,709 ಮಂದಿ ಮೃತಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 99,06,165 ಆಗಿದೆ.

ಡಿಸೆಂಬರ್ 14ರ ವರೆಗೆ ದೇಶದಲ್ಲಿ ಒಟ್ಟು 15.55 ಕೋಟಿ ಕೊರೊನಾ ಪತ್ತೆ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ ಸೋಮವಾರ 9.93 ಲಕ್ಷ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಇದನ್ನೂ ಓದಿ: 

ತೆಲಂಗಾಣದಲ್ಲಿ 491 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಮೂವರು ಮೃತಪಟ್ಟಿದ್ದಾರೆ. ಅಲ್ಲಿ ಈವರೆಗೆ 2.78 ಲಕ್ಷ ಮಂದಿ ಸೋಂಕಿತರಾಗಿದ್ದು, 1,499 ಸೋಂಕಿತರು ಮೃತಪಟ್ಟಿದ್ದಾರೆ. ಸಾರಿಗೆ ಸಚಿವ ಪಿ. ಅಜಯ್ ಕುಮಾರ್ ಅವರಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿತ್ತು.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು, ಅಂದರೆ 73,481 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 57,790 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು