ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೈನಂದಿನ ಪ್ರಕರಣ, ಪಾಸಿಟಿವಿಟಿ ದರ ಇಳಿಕೆ

Last Updated 13 ಫೆಬ್ರುವರಿ 2022, 4:28 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 44,877 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ಹಲವು ದಿನಗಳ ಬಳಿಕ ದೈನಂದಿನ ಪ್ರಕರಣ 50 ಸಾವಿರಕ್ಕಿಂತ ಕಡಿಮೆಯಾದಂತಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 3.17ಕ್ಕೆ ಇಳಿಕೆಯಾಗಿದೆ.

ದೇಶದಲ್ಲೀಗ 5,37,045 ಸಕ್ರಿಯ ಪ್ರಕರಣಗಳಿವೆ.

ಈ ಮಧ್ಯೆ, 5ರಿಂದ 15 ವರ್ಷ ವಯೋಮಾನದವರಿಗೆ ಕೋವಿಡ್‌ ಲಸಿಕೆ ನೀಡುವ ಕುರಿತು ತಜ್ಞರು ಈವರೆಗೆ ಯಾವುದೇ ಶಿಫಾರಸು ಮಾಡಿಲ್ಲ. ಅವರಿಂದ ಶಿಫಾರಸು ಸ್ವೀಕರಿಸಿದ ಕೂಡಲೇ ಲಸಿಕೆ ನೀಡಲು ಆರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT