ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 68 ಲಕ್ಷ ಸಮೀಪಿಸಿದ ಚೇತರಿಕೆ ಸಂಖ್ಯೆ

Last Updated 21 ಅಕ್ಟೋಬರ್ 2020, 4:59 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 54,044 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 717 ಮಂದಿ ಮೃತಪಟ್ಟಿದ್ದಾರೆ. 61,775 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ಈವರೆಗೆ ಸೋಂಕು ತಗುಲಿದವರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ. ಒಟ್ಟು 1,15,914 ಸೋಂಕಿತರು ಅಸುನೀಗಿದ್ದಾರೆ. 67,95,103 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 7,40,090 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಸೋಂಕು ಹರಡಡುವಿಕೆಯ ತೀವ್ರತೆ ಕಡಿಮೆಯಾಗಿರುವುದು ಮಂಗಳವಾರ ಸಂಜೆ ವರದಿಯಾಗಿತ್ತು. ಅಲ್ಲಿ ದಿನವೊಂದರಲ್ಲಿ 8,151 ಹೊಸ ಪ್ರಕರಣಗಳು ದಾಖಲಾಗಿದ್ದವು.

ಭಾರತದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವ ಪ್ರಮಾಣವು ವಿಶ್ವದಲ್ಲೇ ಅತಿಹೆಚ್ಚು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಂಗಳವಾರ ತಿಳಿಸಿದ್ದರು. ವಿಶ್ವದ ಇತರೆ ದೇಶಗಳಲ್ಲಿ ಹೆಚ್ಚಿನ ಪರೀಕ್ಷೆಗಳನ್ನು ನಡೆಸಿದವರ ಪೈಕಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಭಾರತದಲ್ಲಿ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 67 ಲಕ್ಷ ದಾಟಿದೆ. ನಾವು ದೇಶದಲ್ಲಿ 9.6 ಕೋಟಿಗೂ ಹೆಚ್ಚು ಪರೀಕ್ಷೆಗಳನ್ನು ನಡೆಸಿದ್ದೇವೆ ಎಂದು ಅವರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT