ಶುಕ್ರವಾರ, ಆಗಸ್ಟ್ 12, 2022
23 °C

Covid-19 India Update: ಪಶ್ಚಿಮ ಬಂಗಾಳದಲ್ಲಿ 24 ಗಂಟೆಗಳಲ್ಲಿ 3,175 ಪ್ರಕರಣ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Covid-19

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 36,652 ಹೊಸ ಕೋವಿಡ್–19 ಪ್ರಕರಣಗಳು ದೃಡಪಟ್ಟಿದ್ದು, 512 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 96,08,211ಕ್ಕೆ ಏರಿಕೆಯಾಗಿದೆ. ಈವರೆಗೆ 1,39,700 ಮಂದಿ ಅಸುನೀಗಿದ್ದಾರೆ.

ಒಂದೇ ದಿನ 42,533 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 90,58,822 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 4,09,689 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ ಶುಕ್ರವಾರ ಒಂದೇ ದಿನ 5,718 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 61,401ಕ್ಕೆ ಏರಿಕೆಯಾಗಿತ್ತು. ಕರ್ನಾಟಕದಲ್ಲಿ ಹೊಸದಾಗಿ ಪತ್ತೆಯಾಗುವ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ಶುಕ್ರವಾರ ಹೊಸದಾಗಿ 1,247 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 3,175 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆಯು 4,99,697ಕ್ಕೆ ಏರಿಕೆಯಾಗಿದೆ. 3,207 ಜನರು ಗುಣಮುಖರಾಗಿದ್ದು, 49 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನುಳಿದಂತೆ ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ 905, ಉತ್ತರ ಪ್ರದೇಶದಲ್ಲಿ 1,940, ಚಂಡೀಗಡದಲ್ಲಿ 98, ತಮಿಳುನಾಡಿನಲ್ಲಿ 1,366, ಮಣಿಪುರದಲ್ಲಿ 166, ಪಂಜಾಬ್‌ನಲ್ಲಿ 644, ದೆಹಲಿಯಲ್ಲಿ 3,419 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು