ಶನಿವಾರ, ಡಿಸೆಂಬರ್ 5, 2020
25 °C

Covid-19 India Update: ಕೇರಳದಲ್ಲಿ 8,516 ಹೊಸ ಪ್ರಕರಣಗಳು

ಎಎನ್‌ಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 8,516 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ  8,206 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4.48 ಲಕ್ಷ ತಲುಪಿದ್ದು, 84,995 ಸಕ್ರಿಯ ಪ್ರಕರಣಗಳಿವೆ.  

ಆಂಧ್ರ ಪ್ರದೇಶದಲ್ಲಿ 2,477 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 8,33,208 ತಲುಪಿದೆ.

ದೆಹಲಿಯಲ್ಲಿ ಕೋವಿಡ್‌–19 ಪ್ರಕರಗಳ ಸಂಖ್ಯೆ ದಿಢೀರ್‌ ಏರಿಕೆಯಾಗಿದ್ದು, ಕೊರೊನಾ ವೈರಸ್‌ ಸೋಂಕಿನ ಮೂರನೇ ಅಲೆ ವ್ಯಾಪಿಸಿರುವುದಾಗಿ ವಿಶ್ಲೇಷಿಸಲಾಗಿದೆ. 'ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಸರ್ಕಾರ ಕೋವಿಡ್‌–19 ಪರಿಸ್ಥಿತಿಯನ್ನು ಗಮನಿಸುತ್ತಿದೆ. ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವಷ್ಟು ಆಸ್ಪತ್ರೆಗಳಲ್ಲಿ ಹಾಸಿಗೆಗಳು ಲಭ್ಯವಿದೆ' ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಮೊದಲ ಬಾರಿಗೆ ಕೋವಿಡ್–19 ದೃಢಪಟ್ಟ ಪ್ರಕರಣಗಳ ಸಂಖ್ಯೆ 6,000 ದಾಟಿರುವುದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ 5,505 ಹೊಸ ಪ್ರಕರಣಗಳು ದಾಖಲಾಗಿದ್ದು, 8,728 ಮಂದಿ ಗುಣಮುಖರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 3,987 ಪ್ರಕರಣಗಳು ದಾಖಲಾಗಿವೆ.

ಬುಧವಾರ ಬೆಳಗ್ಗಿನ ವರೆಗೂ ದೇಶದಾದ್ಯಂತ ಕೋವಿಡ್‌ ಸೋಂಕಿತರ ಸಂಖ್ಯೆ 83 ಲಕ್ಷ ದಾಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 46,254 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 83,13,877ಕ್ಕೆ ಏರಿಕೆಯಾಗಿದೆ. ಆ ಪೈಕಿ 1,23,611 ಮಂದಿ ಸಾವಿಗೀಡಾಗಿದ್ದಾರೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ 76,56,478 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 5,33,787 ಸಕ್ರಿಯ ಪ್ರಕರಣಗಳಿವೆ.

ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 16.87 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಆ ಪೈಕಿ 44,128 ಮಂದಿ ಮೃತಪಟ್ಟಿದ್ದಾರೆ.ಕರ್ನಾಟಕದಲ್ಲಿ ಮಂಗಳವಾರ 2,756 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8,32,396ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇದುವರೆಗೆ ನ.3 ವರೆಗೆ 11,29,98,959 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು