ಶುಕ್ರವಾರ, ನವೆಂಬರ್ 27, 2020
22 °C

Covid-19 India Update: ಶೇ. 93ಕ್ಕಿಂತ ಹೆಚ್ಚು ಸೋಂಕಿತರು ಗುಣಮುಖ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Covid test

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ 87.7 ಲಕ್ಷಕ್ಕೆ ಏರಿಕೆಯಾಗಿದ್ದು, ಇದರಲ್ಲಿ 81 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ. 93.05ಕ್ಕೆ ಏರಿಕೆಯಾಗಿದೆ.

ಇಂದು ಮಧ್ಯಪ್ರದೇಶದಲ್ಲಿ ಹೊಸದಾಗಿ 1,012 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.83 ಲಕ್ಷಕ್ಕೆ ಏರಿಕೆಯಾಗಿದೆ. ಇದರಲ್ಲಿ 3,083 ಮಂದಿ ಮೃತಪಟ್ಟಿದ್ದು, 9 ಸಾವಿರ ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ ಇಂದು 1,912 ಮಂದಿಗೆ ಸೋಂಕು ತಗುಲಿದ್ದು, 2,494 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 7.56 ಲಕ್ಷಕ್ಕೆ ಏರಿಕೆಯಾಗಿದ್ದು, 17,154 ಸಕ್ರಿಯ ಪ್ರಕರಣಗಳು ಇವೆ. 11,466 ಮಂದಿ ಮೃತಪಟ್ಟಿದ್ದಾರೆ..

ಕೇರಳದಲ್ಲಿ 6,357 ಹೊಸ ಪ್ರಕರಣಗಳು ವರದಿಯಾಗಿದ್ದು, 6,793 ಮಂದಿ ಗುಣಮುಖರಾಗಿದ್ದಾರೆ. ಗುಜರಾತ್‌ನಲ್ಲಿ 1,124, ಆಂಧ್ರ ಪ್ರದೇಶದಲ್ಲಿ 1,657, ತ್ರಿಪುರದಲ್ಲಿ 78 ಪ್ರಕರಣಗಳು ದಾಖಲಾಗಿವೆ. 

ಕರ್ನಾಟದಲ್ಲಿ 2,154 ಹೊಸ ಪ್ರಕರಣ
ಕರ್ನಾಟದಲ್ಲಿ ಇಂದು ಹೊಸದಾಗಿ ಒಟ್ಟು 2,154 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 8,60,082ಕ್ಕೆ ಏರಿಕೆಯಾಗಿದೆ. ಇದರಲ್ಲಿ ಗುಣಮುಖರಾದವರ ಸಂಖ್ಯೆ 8,20,590.

ಇಂದು 17 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 11,508ಕ್ಕೆ ತಲುಪಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು