ಭಾನುವಾರ, ನವೆಂಬರ್ 29, 2020
24 °C

Covid-19 India Update: 88 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಎಎನ್‌ಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್‌ ಪ್ರಕಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ತುರ್ತು ಸಭೆ ನಡೆಸಿ ಪರಿಸ್ಥಿತಿಯ ವಿವರ ಪಡೆದರು.

ತುರ್ತು ನಿಗಾ ಘಟಕದ (ಐಸಿಯು) ಹಾಸಿಗೆಗಳನ್ನು ಒದಗಿಸುವುದು, ಆರ್‌ಟಿ–ಪಿಸಿಆರ್ ತಪಾಸಣೆ ಸಂಖ್ಯೆ ಹೆಚ್ಚಿಸುವುದು, ಅರೆ ಸೇನಾಪಡೆಯ ವೈದ್ಯರು ಮತ್ತು ಆರೋಗ್ಯ ಸೇವೆ ಸಿಬ್ಬಂದಿ ಸೇವೆಯನ್ನು ಒದಗಿಸುವುದು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ತಿಳಿಯಲು ವಿಶೇಷ ತಂಡ ರಚಿಸಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ದೆಹಲಿ ಲೆಫ್ಟಿನಂಟ್ ಗವರ್ನರ್ ಅನಿಲ್ ಬೈಜಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಸಭೆಗೆ ಹಾಜರಾಗಿದ್ದರು. ದೆಹಲಿಯಲ್ಲಿ ಹೊಸದಾಗಿ 3,235 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,85 ಲಕ್ಷಕ್ಕೆ ಏರಿಕೆಯಾಗಿದೆ.

ಇಂದು ಆಂಧ್ರ ಪ್ರದೇಶದಲ್ಲಿ 1,056, ಪಂಜಾಬ್‌ನಲ್ಲಿ 1,054, ಮಹಾರಾಷ್ಟ್ರದಲ್ಲಿ 2,544, ರಾಜಸ್ಥಾನದಲ್ಲಿ 2,184 ಪ್ರಕರಣಗಳು ವರದಿಯಾಗಿವೆ. ಹರಿಯಾಣದಲ್ಲಿ 1,957, ಮಧ್ಯಪ್ರದೇಶದಲ್ಲಿ 870, ಆಂಧ್ರ ಪ್ರದೇಶದಲ್ಲಿ 1,657, ತ್ರಿಪುರದಲ್ಲಿ 78 ಪ್ರಕರಣಗಳು ದಾಖಲಾಗಿವೆ.

ಒಟ್ಟಾರೆ ದೇಶದಾದ್ಯಂತ ಇದುವರೆಗೆ ಕೋವಿಡ್‌–19 ಸೋಂಕಿತರ ಸಂಖ್ಯೆ 88 ಲಕ್ಷಕ್ಕೆ ಏರಿಕೆಯಾಗಿದ್ದು, ಇದರಲ್ಲಿ 82 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ. 93.09ಕ್ಕೆ ಏರಿಕೆಯಾಗಿದೆ.

ಕರ್ನಾಟದಲ್ಲಿ 1,565 ಹೊಸ ಪ್ರಕರಣ
ರಾಜ್ಯದಲ್ಲಿ ಇಂದು 1,565 ಜನರಿಗೆ ಸೋಂಕು ತಗುಲಿರುವುದು ವರದಿಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 8,60,082ಕ್ಕೆ ಏರಿಕೆಯಾಗಿದೆ. ಇದರಲ್ಲಿ 8,22,953 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ, 11,529 ಮಂದಿ ಮೃತಪಟ್ಟಿದ್ದು, ಇನ್ನೂ 27,146 ಪ್ರಕರಣಗಳು ಸಕ್ರಿಯವಾಗಿವೆ.

ನವೆಂಬರ್‌ 14ರಂದು 2,154 ಪ್ರಕರಣಗಳು ವರದಿಯಾಗಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು